ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ‘ರಾಮರಾಜ್ಯ’ಕ್ಕೆ ನಾಂದಿ ಹಾಡುವ ಬೆಳವಣಿಗೆ: ವಿಜಯೇಂದ್ರ

ಪ್ರಧಾನಿ ಮೋದಿಯವರ ಆಶಯದಂತೆ ರಾಮರಾಜ್ಯ ಶೀಘ್ರದಲ್ಲೇ ನನಸಾಗಲಿದೆ, ಇದು ಕೇವಲ ದೀಪಾವಳಿ ಅಲ್ಲ, ಅಯೋಧ್ಯೆ ದೀಪಾವಳಿ ಎಂದು ವಿಜಯೇಂದ್ರ ಹೇಳಿದ್ದಾರೆ.
ವಿಜಯೇಂದ್ರ
ವಿಜಯೇಂದ್ರ

ಬೆಂಗಳೂರು: ಪ್ರಧಾನಿ ಮೋದಿಯವರ ಆಶಯದಂತೆ ರಾಮರಾಜ್ಯ ಶೀಘ್ರದಲ್ಲೇ ನನಸಾಗಲಿದೆ, ಇದು ಕೇವಲ ದೀಪಾವಳಿ ಅಲ್ಲ, ಅಯೋಧ್ಯೆ ದೀಪಾವಳಿ ಎಂದು ವಿಜಯೇಂದ್ರ ಹೇಳಿದ್ದಾರೆ.

ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ನಂತರ, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಉತ್ತರಾಭಿಮುಖವಾಗಿ ದೀಪಗಳನ್ನು ವಿಜಯೇಂದ್ರ  ಬೆಳಗಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಮರಾಜ್ಯದ ಆದರ್ಶ ಜೀವನ ಮುಂದಿನ ದಿನಗಳಲ್ಲಿ ಜನರ ಅನುಭವಕ್ಕೆ ಬರಲಿದೆ. ಪ್ರತಿ ಜಿಲ್ಲೆ ಮತ್ತು ರಾಜ್ಯವನ್ನು ಅಭಿವೃದ್ಧಿ ಮತ್ತು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು ಮತ್ತು 2047 ರ ವೇಳೆಗೆ ‘ಅಭಿವೃದ್ಧಿ ಹೊಂದಿದ ಭಾರತ’ವನ್ನು ಸಾಧಿಸಲು ಮೋದಿ ಸಜ್ಜಾಗುತ್ತಿದ್ದಾರೆ ಎಂದು ಅವರು ಹೇಳಿದರು.

ಮೋದಿಯವರ ಕರೆಗೆ ಓಗೊಟ್ಟು ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾನವನ್ನು ಆಚರಿಸಲು ಪ್ರತಿ ಮನೆಯಲ್ಲೂ ದೀಪಗಳನ್ನು ಬೆಳಗಿಸಿದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. “ಪ್ರಾಣ ಪ್ರತಿಷ್ಠಾನವನ್ನು ಭಾರತದ ಮೂಲೆ ಮೂಲೆಗಳಿಂದ ಯತಿಗಳು, ಸಾಧುಗಳು ಮತ್ತು ಸಂತರ ಸಮ್ಮುಖದಲ್ಲಿ ಮಾಡಲಾಯಿತು. ದೇಶದ ಪ್ರತಿಯೊಬ್ಬ ಭಕ್ತರ ಹೃದಯದಲ್ಲಿ ಭಗವಾನ್ ಶ್ರೀರಾಮನ ಭಕ್ತಿಯ ಅರಿವಿದೆ, ಎಂದು ಅವರು ಹೇಳಿದರು.

ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂಭ್ರಮದ ವಾತಾವರಣವಿತ್ತು. ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು.

ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು ಹೆಮ್ಮೆ ಪಡುತ್ತಿದ್ದಾರೆ ಎಂದು ನುಡಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠೆ ಕಾರ್ಯ ನೆರವೇರಿದೆ. ಇದು ಅತ್ಯಂತ ಹೆಮ್ಮೆಯ ಮತ್ತು ಸಂತೋಷದ ವಿಚಾರ ಎಂದು ತಿಳಿಸಿದರು.  ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆ, ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ ಎಂದು ನೆನಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com