ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅಧಿಕಾರ, ಇದು ಹೈಕಮಾಂಡ್ ಸೂತ್ರ: ಡಿಸಿಎಂ ಡಿ.ಕೆ ಶಿವಕುಮಾರ್

ಪಕ್ಷಕ್ಕಾಗಿ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ.

ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಕೇಳಿದಾಗ, "ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ ಏನಾಯಿತು?. ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ. ಬೇಡ ಎಂದವರು ಯಾರು? ವಿಧಾನಸಭಾ ಚುನಾವಣೆಯಲ್ಲಿ ನಾವು 136- 140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಎಂದು ಪ್ರಶ್ನಿಸಿದರು.

Related Stories

No stories found.

Advertisement

X
Kannada Prabha
www.kannadaprabha.com