ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಮಂಡ್ಯದಲ್ಲಿ ‘ಹನುಮಧ್ವಜ’ ತೆಗೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬೊಮ್ಮಾಯಿ

ಹಾವೇರಿ: ಮಂಡ್ಯದಲ್ಲಿ ‘ಹನುಮಧ್ವಜ’ ತೆಗೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಕ್ರಮದಲ್ಲಿ ತೊಡಗಿದವರಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.

ಪೊಲೀಸರ ಮೂಲಕ ಸರ್ಕಾರ ಪವಿತ್ರ ಧ್ವಜವನ್ನು ತೆಗೆಸಿದೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಮಂತ್ರವನ್ನು ಸಿಎಂ ಸಿದ್ದರಾಮಯ್ಯ ಜಪಿಸುತ್ತಿರುವಾಗಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಳೆದ ವಾರ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಇಂತಹ ಅನೇಕ ಘಟನೆಗಳು ವರದಿಯಾಗಿವೆ. ಕೆಲವರನ್ನು ಬಂಧನಕ್ಕೊಳಪಡಿಸಲಾಗಿದೆ. ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ಅನೈತಿಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಿಸುತ್ತಿದೆ' ಎಂದು ಹೇಳಿದರು.

ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಮಹಿಳೆಯರ ಮೇಲಿನ ದೌರ್ಜನ್ಯ ಶೇ.30ರಷ್ಟು ಹೆಚ್ಚಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com