ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜೆಡಿಎಸ್ ಗೆ ಒಲಿದ ಕ್ಷೇತ್ರ; ಎನ್ ಡಿಎ ಅಭ್ಯರ್ಥಿ ರಂಗನಾಥ್ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್ ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಎ.ಪಿ ರಂಗನಾಥ್ ನಾಮಪತ್ರ ಸಲ್ಲಿಕೆ
ಎ.ಪಿ ರಂಗನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್ ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿಎನ್.ಅಶ್ವತ್ಥನಾರಾಯಣ, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

2023 ರ ವಿಧಾನಸಭಾ ಚುನಾವಣೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಸಹ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆ.16 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನ. ನಾಮಪತ್ರ ಪರಿಶೀಲನೆ ಜ. 31 ರಂದು ನಡೆಯಲಿದೆ. ನಾಮಪತ್ರ ವಾಪಸ್ಸಾತಿಗೆ ಫೆ. 2 ಕೊನೆಯ ದಿನಾಗಿದೆ ಈ ಚುನಾವಣೆಯ ಮತ ಎಣಿಕೆ ಫೆ. 20 ರಂದು ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com