'ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ': ಗಣಿಧಣಿ ಜನಾರ್ದನ ರೆಡ್ಡಿ

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಗಣಿ ಉದ್ಯಮಿ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಪುನರುಚ್ಛಸಿದ್ದಾರೆ.
ಗಾಲಿ ಜನಾರ್ಧನ ರೆಡ್ಡಿ
ಗಾಲಿ ಜನಾರ್ಧನ ರೆಡ್ಡಿ

ಕೊಪ್ಪಳ: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಗಣಿ ಉದ್ಯಮಿ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಪುನರುಚ್ಛಸಿದ್ದಾರೆ.

ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, 'ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನೋಡಲು ನಾನು ಬಯಸುತ್ತೇನೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಬಯಸಿದರೆ ನಾನು ಮೈತ್ರಿಗೆ ಸಿದ್ಧ. ಒಂದು ವೇಳೆ ಮೈತ್ರಿ ಏರ್ಪಡದಿದ್ದರೆ ಮತ್ತು ತಮ್ಮ ಪಕ್ಷವು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸುವುದಾಗಿ ಅವರು ಹೇಳಿದರು.

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಕ್ಕೆ ರೆಡ್ಡಿ ಭೇಟಿ ನೀಡಿ, ಕಾಂಗ್ರೆಸ್ ಸರ್ಕಾರ ಹನುಮಾನ್ ಧ್ವಜ ತೆರವು ಮಾಡಿದ್ದಕ್ಕೆ ಪ್ರತಿಭಟನೆ ನಡೆಸುತ್ತಿದ್ದ ಜನರೊಂದಿಗೆ ಜನಾರ್ಧನ ರೆಡ್ಡಿ ಮಾತನಾಡಿದರು. ''ಗ್ರಾಮದ ಎಲ್ಲಾ ಧರ್ಮದ ಜನರು ಧ್ವಜಸ್ತಂಭವನ್ನು ನಿರ್ಮಿಸಿದ್ದಾರೆ. ಅವರು ಹನುಮಂತನ ಧ್ವಜಾರೋಹಣವನ್ನು ವರ್ಷಗಳಿಂದ ಮಾಡುತ್ತಿದ್ದಾರೆ. ಜನರ ನಡುವೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡ್ಯದಲ್ಲಿ ಶಾಂತಿಗೆ ಧಕ್ಕೆ ತರುವ ಪರಿಸ್ಥಿತಿ ನಿರ್ಮಾಣ ಮಾಡಿದೆ ಎಂದು ಹೇಳಿದರು.

ಅಲ್ಲದೆ “ಘಟನೆಯಿಂದಾಗಿ ಪ್ರತಿಯೊಬ್ಬ ಗ್ರಾಮಸ್ಥರು ನೋವು ಮತ್ತು ದುಃಖಿತರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಗ್ರಾಮಕ್ಕೆ ಬಂದು ಹನುಮ ಧ್ವಜಾರೋಹಣ ಮಾಡಿ ಅವರನ್ನು ಸಮಾಧಾನಪಡಿಸಬೇಕು. ಭಗವಾನ್ ಹನುಮಂತನನ್ನು ವಿರೋಧಿಸಿದರೆ ಯಾರೂ ಉಳಿಯಲು ಸಾಧ್ಯವಿಲ್ಲ. ಅವನ ಬಾಲವನ್ನು ಸುಟ್ಟುಹಾಕಿದ್ದಕ್ಕಾಗಿ ಇಡೀ ಲಂಕಾ ಸುಟ್ಟುಹೋಯಿತು. ಸಿಎಂ ಸಿದ್ದರಾಮಯ್ಯ ಸರ್ಕಾರ ಪಶ್ಚಾತ್ತಾಪ ಪಡಬೇಕು ಮತ್ತು ಈ ನಿಟ್ಟಿನಲ್ಲಿ ಮಾಡಿದ ಪಾಪಗಳನ್ನು ತೊಳೆದುಕೊಳ್ಳಲು ಮತ್ತೆ ಹನುಮ ಧ್ವದ ಹಾರಿಸಲು ಸರ್ಕಾರ ಕ್ರಮ ವಹಿಸಬೇಕು' ಎಂದು ರೆಡ್ಡಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com