ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎನ್​ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್ ​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎನ್​ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್ ​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಕಾಂಗ್ರೆಸ್​​ನವರಿಗೆ ಕೇಸರಿ ಮೇಲೆ ಯಾಕೆ ಸಂಕುಚಿತ ಮನೋಭಾವ? ಮಂಡ್ಯ ಉಸ್ತುವಾರಿ ಸಚಿವರಿಂದ ನಾನು ನನ್ನ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದನ್ನು ಕಲಿಯಬೇಕಿಲ್ಲ. ನನಗೆ ಜನ ಕೊಟ್ಟಿರುವ ಪ್ರೀತಿ ಇದೆ ಎಂದು ಚಲುವರಾಯ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಮಂಡ್ಯದಲ್ಲಿ ಆರಂಭ ಆಗಿರುವ ಒಂದು ಘಟನೆಯಿಂದಾಗಿ ಈ‌ ಸರ್ಕಾರದ ಕೆಲ ನಡವಳಿಕೆ ಬಗ್ಗೆ ‌ಮತನಾಡಲೇಬೇಕಿದೆ. ಮಾಜಿ ಸಿಎಂ ದಿ. ದೇವರಾಜು ಅರಸು ಅವರಿಗಿಂತ ಸಿಎಂ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿ ಶೋಷಿತರ ಧ್ವನಿಯಾಗಿ ಚಿತ್ರದುರ್ಗದಲ್ಲಿ ಮಾಡಿದ ವೀರಾವೇಷದ ಭಾಷಣ ಕೇಳಿದ್ದೇನೆ.

ಮಂಡ್ಯದಲ್ಲಿ ನಮ್ಮ ಹಳೆಯ ಸ್ನೇಹಿತ ಮಾತನಾಡಿರುವುದನ್ನೂ ಕೇಳಿದ್ದೇನೆ. ಮಂಡ್ಯವನ್ನು ಹಾಳು ಮಾಡಲು ಕುಮಾರಸ್ವಾಮಿ ಬಂದಿದ್ದಾರೆ ಎಂದಿದ್ದಾರೆ. ಮಂಡ್ಯದಲ್ಲಿ ನಡೆದ ಘಟನೆಗೂ ನನಗೂ ಏನೂ ಸಂಬಂಧ ಎಂದು ಸಿಎಂ ಮತ್ತು ಉಸ್ತುವಾರಿ ಸಚಿವರನ್ನು ಕೇಳುತ್ತೇನೆ. ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ನಾನು ಕೊನೆ ಹಂತದಲ್ಲಿ ಭಾಗಿಯಾಗಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಸೋಮವಾರದ ಭಾಷಣದಲ್ಲಿ ಬೆಂಕಿ‌‌ ಹಚ್ಚಿ‌, ಫ್ಲೆಕ್ಸ್ ಹರಿಯಿರಿ ಅಂತ ಹೇಳಿಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬುದಾಗಿ ಆಗ್ರಹಿಸಿದ್ದೆ ಅಷ್ಟೆ. ಕೆರೆಗೋಡಿನ ಜನತೆ ಜನವರಿ 26 ರಂದು ರಾಷ್ಟ್ರ ಧ್ವಜ ಹಾರಿಸಿದ್ದಾರೆಯೇ ವಿನಃ ಸರ್ಕಾರ ಅಲ್ಲ. ಕಾಂಗ್ರೆಸ್ ಶಾಸಕರನ್ನು ಕರೆದಿಲ್ಲ ಎಂದು ಈ ಗಲಾಟೆ ಆರಂಭ ಆಗಿದೆ ಎಂದು ಅವರು ದೂರಿದ್ದಾರೆ.

ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರ್ಕಾರವೇ ನಕಲಿ ದಾಖಲೆ ಸರ್ಕಾರ ಸೃಷ್ಟಿ ಮಾಡಿಕೊಂಡು ಆರೋಪ ಮಾಡುತ್ತಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com