ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ: ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ; ಇಂದು ಸಿಎಂ ಮನೆಗೆ ಮುತ್ತಿಗೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.
ಬಿ ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ
Updated on

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕನಾಗಿ ಮಾಡಿದ ಚೊಚ್ಚಲ ಭಾಷಣವು ಆಧಾರರಹಿತ ಆರೋಪ ಮತ್ತು ಸುಳ್ಳುಗಳಿಂದ ತುಂಬಿತ್ತು. ರಾಹುಲ್ ಗಾಂಧಿ ಇಡೀ ಹಿಂದೂ ಸಮುದಾಯವನ್ನು ಅವಮಾನಿಸಿದ್ದಾರೆ ಅವರು ಕ್ಷಮೆಯಾಚಿಸಬೇಕೆಂದು ವಿಜಯೇಂದ್ರ ಹೇಳಿದರು, ಕಾಂಗ್ರೆಸ್ ಸಂಸದರ ನಡವಳಿಕೆಯು ನಿಯಮಗಳನ್ನು ಉಲ್ಲಂಘಿಸಿರುವುದರಿಂದ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದರು.

ಚುನಾವಣೆ ವೇಳೆಯೂ ರಾಹುಲ್ ಗಾಂಧಿ ದೇಶಾದ್ಯಂತ ಸಂಚರಿಸಿ ಸುಳ್ಳು ಪ್ರಚಾರ ಮಾಡಿದ್ದಾರೆ. ಈಗ, ವಿರೋಧ ಪಕ್ಷದ ನಾಯಕನಾಗಿ ತಮ್ಮ ಹಳೆಯ ಅಭ್ಯಾಸಗಳನ್ನು ಮುಂದುವರೆಸಿದ್ದಾರೆ. ಅವರು ಮೌಲ್ಯಗಳನ್ನು ಎತ್ತಿಹಿಡಿಯಬೇಕು, ಆದರೆ ಅವರು ಅದನ್ನು ಮಾಡುತ್ತಿಲ್ಲ ಎಂದರು, ರಾಹುಲ್ ಗಾಂಧಿ ದೇಶದ ಸೈನಿಕರು, ರೈತರು ಮತ್ತು ಇತರರನ್ನು ತಮ್ಮ ಮಾತಿನಲ್ಲಿ ಅವಮಾನಿಸಿದ್ದಾರೆ, ತಮ್ಮ ಭಾಷಣಕ್ಕೆ ಸದನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದಲ್ಲದೆ, 2010 ರಲ್ಲಿ ಅಂದಿನ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರು ಹಿಂದೂಗಳನ್ನು ಭಯೋತ್ಪಾದಕರು ಎಂದು ಕರೆದಿದ್ದರು ಎಂದು ವಿಜಯೇಂದ್ರ ಹೇಳಿದರು. 2013ರಲ್ಲಿ ಸುಶೀಲ್ ಕುಮಾರ್ ಶಿಂಧೆ ಕೂಡ ಇದೇ ರೀತಿ ಮಾತನಾಡಿದ್ದರು. 2021 ರಲ್ಲಿ, ಹಿಂದುತ್ವವನ್ನು ಬೆಂಬಲಿಸುವವರನ್ನು ದೇಶದಿಂದ ಹೊರಹಾಕಬೇಕು ಎಂದು ಹೇಳಿದ್ದ ರಾಹುಲ್ ಗಾಂಧಿ, ಈಗ ತಮ್ಮ ಭಾಷಣದಲ್ಲಿ ಅದನ್ನೇ ಪುನರಾವರ್ತಿಸಿದ್ದಾರೆ. ಕರ್ನಾಟಕದಲ್ಲಿಯೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇದೇ ಹೇಳಿಕೆ ನೀಡಿದ್ದಾರೆ. ಸಭಾಧ್ಯಕ್ಷರಿಗೂ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಬಿ ವೈ ವಿಜಯೇಂದ್ರ
ಮೋದಿ, ಬಿಜೆಪಿ, RSS ಮಾತ್ರ ಇಡೀ ಹಿಂದೂ ಸಮುದಾಯವಲ್ಲ: ಲೋಕಸಭೆಯಲ್ಲಿ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಮತಾಂತರ ಮಾಫಿಯಾದ ಕೈಗೊಂಬೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಟೀಕಿಸಿದ್ದಾರೆ. ಬಿಜೆಪಿ ನಾಯಕರ ಮಾತಿಗೆ ತಿರುಗೇಟು ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಹಿಂದೂ ಸಮುದಾಯವು ಶಾಂತಿಯನ್ನು ಪ್ರತಿನಿಧಿಸುತ್ತದೆ ಮತ್ತು ಎಲ್ಲರನ್ನೂ ಜೊತೆಗೆ ಕರೆದೊಯ್ಯುತ್ತದೆ. ಶಾಂತಿಗೆ ವಿರುದ್ಧವಾಗಿರುವವರು ಹಿಂದೂಗಳಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿ ಸದಸ್ಯರಿಗೆ ಅವರ ಮಾತು ಅರ್ಥವಾಗಲಿಲ್ಲ ಎಂದರು.

ಸಿಎಂ ಮನೆಗೆ ಮುತ್ತಿಗೆ ಹಾಕಲಿರುವ ಬಿಜೆಪಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಮತ್ತು ಎಸ್‌ಟಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಖಂಡಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಮತ್ತಿತರರು ಇಂದು ಬೆಳಗ್ಗೆ ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com