ಚನ್ನಪಟ್ಟಣ ಉಪ ಚುನಾವಣೆ: ನೂರಕ್ಕೆ ನೂರು ನನ್ನ ಪತ್ನಿ ಅನಸೂಯ ಸ್ಪರ್ಧಿಸಲ್ಲ- ಸಂಸದ ಡಾ. ಸಿಎನ್ ಮಂಜುನಾಥ್

ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ.
ಡಾ. ಮಂಜುನಾಥ್ ಮತ್ತು ಪತ್ನಿ ಅನಸೂಯ
ಡಾ. ಮಂಜುನಾಥ್ ಮತ್ತು ಪತ್ನಿ ಅನಸೂಯ
Updated on

ಬೆಂಗಳೂರು: ಒಕ್ಕಲಿಗ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪುತ್ರಿ ಅನಸೂಯ ಸ್ಪರ್ಧಿಸುತ್ತಾರೆ ಎಂಬ ವದಂತಿ ಇದೆ. ಆದರೆ ತಮ್ಮ ಪತ್ನಿ ಅನಸೂಯ ಅವರು ನೂರಕ್ಕೆ ನೂರು ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರು ಶನಿವಾರ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ತಮ್ಮ ಪತ್ನಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ ಮಂಜುನಾಥ್ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಉಪ ಚುನಾವಣೆ ಎದುರಾಗಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅನಸೂಯ ಅವರನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.

ಡಾ. ಮಂಜುನಾಥ್ ಮತ್ತು ಪತ್ನಿ ಅನಸೂಯ
NDA ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ: ಅನಸೂಯ ಮಂಜುನಾಥ್ ವಿರುದ್ಧ ಕುಸುಮಾ ಕಣಕ್ಕೆ?

ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ನೀಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ

ಇನ್ನು ರಾಜ್ಯದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಗ್ರಾಮಾಂತರ ಸಂಸದ, ಡೆಂಗ್ಯು ಜ್ವರಕ್ಕೆ ಅಡ್ಮಿಟ್ ಆದವರಿಗೆ, ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತೋ ಅದೇ ರೀತಿ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಡೆಂಗ್ಯೂ ಫಿವರ್‌ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯು ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com