ಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ: ಡಿ ಕೆ ಶಿವಕುಮಾರ್

ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ.
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಆರೋಪ ಸಂಬಂಧ ಪ್ರತಿಕ್ರಿಯಿಸಿದರು. “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ.

ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಿ ಬೆಳೆಯುತ್ತಾರೆ ಎಂದರು.

ಡಿ.ಕೆ.ಶಿವಕುಮಾರ್
ಚುನಾವಣಾ ಲೋಪದೋಷ ಸರಿಪಡಿಸಲು ಮುಂದು; ಕಮಲ-ದಳ ಮೈತ್ರಿ ಎದುರಿಸಲು ಡಿಕೆಶಿ ತಂತ್ರ!

ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

ಮುಡಾ ಹಗರಣದ ವಿರುದ್ದ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ “ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೊ ಅದನ್ನು ಕೊಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com