BJP stages demo against Congress govt
ಬಿಜೆಪಿ ಪ್ರತಿಭಟನೆ

ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮುಡಾ ಹಗರಣದಲ್ಲಿ ದಲಿತರು, ಪರಿಶಿಷ್ಟ ಪಂಗಡಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಿವೇಶನಗಳನ್ನು ದೊಡ್ಡವರು ಕಬಳಿಸಿದ್ದಾರೆ.
Published on

ಬೆಂಗಳೂರು: ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, SC/ST ನಿಧಿ ಬಳಕೆ, ವಕ್ಫ್ ಬೋರ್ಡ್ ಹಗರಣದ ವಿಚಾರವಾಗಿ ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಶಾಸಕರು ತುಂತುರು ಮಳೆಯ ನಡುವೆಯೇ ವಿಧಾನಸೌಧದ ಬಳಿಯ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಧರಣಿ ಪ್ರತಿಭಟನೆ ನಡೆಸಿದರು.

BJP stages demo against Congress govt
ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ; ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ

ಸರ್ಕಾರವನ್ನು ಖಂಡಿಸುವ ಬ್ಯಾನರ್‌ಗಳೊಂದಿಗೆ ಮೆರವಣಿಗೆಯನ್ನೂ ನಡೆಸಿದ ನಾಯಕರು, ಘೋಷಣಾ ಫಲಕಗಳನ್ನು ಹಿಡಿದು ಕಾಂಗ್ರೆಸ್ ಸರ್ಕಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ''ಸರ್ಕಾರ ದಲಿತರು ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧವಾಗಿದೆ. ಕರ್ನಾಟಕ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಇದರ ವಿರುದ್ಧ ತನ್ನ ಹೋರಾಟವನ್ನು ಮುಂದುವರೆಸುತ್ತದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ತನಿಖೆಯಿಂದ ಲೋಕಸಭೆ ಚುನಾವಣೆಯಲ್ಲಿ ಹಣ ದುರ್ಬಳಕೆಯಾಗಿರುವುದು ಬೆಳಕಿಗೆ ಬಂದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬ ಶಾಮೀಲಾಗಿದೆ ಎಂದು ಕಿಡಿಕಾರಿದರು.

ಮುಡಾ ಹಗರಣದಲ್ಲಿ ದಲಿತರು, ಪರಿಶಿಷ್ಟ ಪಂಗಡಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಿವೇಶನಗಳನ್ನು ದೊಡ್ಡವರು ಕಬಳಿಸಿದ್ದಾರೆ. ಮುಡಾ ಹಗರಣದ ತನಿಖೆಗಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರ ತನಿಖಾ ಆಯೋಗವನ್ನು ರಚಿಸುವ ರಾಜ್ಯ ಸರ್ಕಾರದ ಆದೇಶವನ್ನು ಬಿಜೆಪಿ ಒಪ್ಪುವುದಿಲ್ಲ. ನಮಗೆ ಸಿಬಿಐ ತನಿಖೆ ಮಾತ್ರ ಬೇಕು, ಸಿಬಿಐ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆ ಎಂಬುದು ಮುಖ್ಯಮಂತ್ರಿಗೆ ಗೊತ್ತಿದೆ. ಹೀಗಾಗಿ ಅವರು ಅದಕ್ಕೆ ಒಪ್ಪುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com