Valmiki ಹಗರಣದಲ್ಲಿ ಸರ್ಕಾರದ ಪ್ರಮುಖರ ಸಿಲುಕಿಸಲು ED ಮೂಲಕ ಕೇಂದ್ರ ಸರ್ಕಾರ ಯತ್ನ: ಸಚಿವರಿಂದ ಸುದ್ದಿಗೋಷ್ಠಿ

ಈ ಬಗ್ಗೆ ರಾಜ್ಯ ಸರ್ಕಾರದ ಪ್ರಮುಖ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಸೇರಿ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ.
Krishna Byre Gowda
ಸಚಿವ ಕೃಷ್ಣಬೇರೇಗೌಡ ಸುದ್ದಿಗೋಷ್ಠಿ
Updated on: 

ಬೆಂಗಳೂರು: ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ವಾಲ್ಮೀಕಿ ನಿಗಮದ ಹಗರಣದಲ್ಲಿ ರಾಜ್ಯ ಸರ್ಕಾರದ ಪ್ರಮುಖರನ್ನು ಸಿಲುಕಿಸಲು ED ಮೂಲಕ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕರ್ನಾಟಕ ಗಂಭೀರ ಆರೋಪ ಮಾಡಿದೆ.

ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳ ಹೆಸರು ಹೇಳಲು ಬಂಧಿತರಿಗೆ ಇ.ಡಿ ( ಜಾರಿ ನಿರ್ದೇಶನಾಲಯ) ಒತ್ತಡ ಹೇರುತ್ತಿದೆ ಎಂದು ರಾಜ್ಯಸರ್ಕಾರ ಆರೋಪ ಮಾಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ಪ್ರಮುಖ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಸೇರಿ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ.

Krishna Byre Gowda
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಆದಿವಾಸಿಗಳ ಕಣ್ತೆರೆಸುವ ಪ್ರಕರಣ!

ಈ ವೇಳೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ''ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳ ಹೆಸರು ಹೇಳಲು ಬಂಧಿತರಿಗೆ ಇ.ಡಿ ( ಜಾರಿ ನಿರ್ದೇಶನಾಲಯ) ಒತ್ತಡ ಹೇರುತ್ತಿದೆ. ವಿರೋಧ ಪಕ್ಷಗಳ ಮೇಲೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ಮೂಲಕ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಇದೇವೇಳೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿರುವ ಹಗರಣಗಳ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು. ಭೂಮಿ ನಿಗಮ, ಅಂಬೇಡ್ಕರ್ ನಿಗಮದಲ್ಲಿ ನಡೆದ ಹಗರಣ, ಕೋವಿಡ್ ಅಕ್ರಮದ ಬಗ್ಗೆ ಏಕೆ ತನಿಖೆ ಮಾಡಿಲ್ಲ? ವಿರೋಧ ಪಕ್ಷದಲ್ಲಿ ಇದ್ದಾಗ ಕೇಸ್ ಹಾಕ್ತಾರೆ, ಬಿಜೆಪಿಗೆ ಬಂದರೆ ಅವರಿಗೆ ಕ್ಲೀನ್ ಚಿಟ್ ನೀಡಲಾಗ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿ ವಾಮಮಾರ್ಗಗಳನ್ನು ಬಳಸಿ ಏಕ ಪಕ್ಷ ಸಾಮ್ರಾಜ್ಯವನ್ನು ದೇಶದಲ್ಲಿ ಕಟ್ಟುತ್ತಿದೆ.

ಐಟಿ ಇಡಿ, ಸಿಬಿಐ ಬಳಕೆ ಮಾಡಿಕೊಂಡು ಸರ್ಜಿಕಲ್ ಸ್ಟ್ರೈಕ್ ರೀತಿಯಲ್ಲಿ ವಿರೋಧ ಪಕ್ಷದ ಮೇಲೆ ದಾಳಿ ಮಾಡುತ್ತಿದೆ. ಇ.ಡಿ ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರವನ್ನು ಬುಡಮೇಲು ‌ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ವಾಲ್ಮೀಕಿ ನಿಗಮದ ಹಗರಣ ತನಿಖೆ ನಡೆಸಲಾಗ್ತಿದೆ. ತನಿಖೆಗೆ ಒಳಪಟ್ಟವರ ಮೇಲೆ ಒತ್ತಡ ತಂದು ಸರ್ಕಾರದ ಉನ್ನತ ಮಟ್ಟದಲ್ಲಿ ಇರುವವರ ಹೆಸರು ಹೇಳಬೇಕು ಎಂದು ಇ.ಡಿ ಒತ್ತಡ ಹೇರುತ್ತಿದೆ. ಈ ಮೂಲಕ ಚುನಾಯಿತ ಸರ್ಕಾರವನ್ನು ಬುಡಮೇಲು ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದರು.

ತಪ್ಪಿತಸ್ಥರನ್ನು ಹುಡುಕುವ ಉದ್ದೇಶವೇ ಇಲ್ಲ

ಅವರು ಹೇಳಿದಂತೆ ಕೇಳಿದರೆ ರಕ್ಷಣೆ ‌ಮಾಡುತ್ತೇನೆ. ಇಲ್ಲದೆ ಇದ್ದರೆ ಇ.ಡಿ ಪವರ್ ತೋರಿಸುತ್ತೇವೆ ಎಂದು ಬೆದರಿಕೆ ಹಾಕ್ತಿದ್ದಾರೆ. ಇ.ಡಿಗೆ ತಪ್ಪಿತಸ್ಥರನ್ನು ಹುಡುಕುವ ಯಾವ ಉದ್ದೇಶ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬುಡಮೇಲು ಮಾಡುವ ಉದ್ದೇಶ ಕೇಂದ್ರಕ್ಕೆ ಇದೆ ಎಂದು ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ವಿರೋಧ ಪಕ್ಷಗಳನ್ನು ಮಟ್ಟಹಾಕಲು ಕೇಂದ್ರದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ.

ರಾಜ್ಯದಲ್ಲೂ ಅದೇ ಪ್ರಕ್ರಿಯೆ ಪ್ರಾರಂಭ ಆಗಿದೆ. ಇ.ಡಿ ಸಿಬಿಐ, ಐಟಿ ಎಲ್ಲವೂ ಕೇಂದ್ರ ಸರ್ಕಾರದ ರಾಜಕೀಯ ಅಸ್ತ್ರವಾಗಿದೆ. ಇದನ್ನು ಬಳಸಿ ವಿರೋಧ ಪಕ್ಷದ ಸರ್ಕಾರ ಇರುವ ಕಡೆ ದಾಳಿ ನಡೆಸಲಾಗ್ತಿದೆ. ಹಲವು ರಾಜ್ಯಗಳಲ್ಲಿ ಇಂತಹ ಬೆಳವಣಿಗೆ ಆಗಿದೆ. ಸಾಕ್ಷಿಗಳ ಮೇಲೆ ಇ.ಡಿ ಹೆದರಿಸಿ, ಬೆದರಿಸಿ ಹೇಳಿಕೆ ಕೊಡಿಸಲು ಪ್ರಯತ್ನ ಮಾಡಲಾಗ್ತಿದೆ. ಇದಕ್ಕೆ ನಾವು ಬಗ್ಗಲ್ಲ. ಅಗತ್ಯ ಬಂದರೆ ಕಾನೂನು ಹೋರಾಟ ಮಾಡ್ತೇವೆ. ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇಡಿ, ಸಿಬಿಐಗೆ ಏಕೆ ಹೆಚ್ಚಿನ ಆಸಕ್ತಿ?: ಪ್ರಿಯಾಂಕ್ ಖರ್ಗೆ

ಇನ್ನು ಇದೇ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, 'ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡಿ ಮತ್ತು ಸಿಬಿಐ ಹೆಚ್ಚಿನ ಆಸಕ್ತಿ ವಹಿಸಿದೆ. ಭೋವಿ ನಿಗಮ, ತಾಂಡಾ ಕಾರ್ಪೊರೇಷನ್ ಇತ್ಯಾದಿಗಳಲ್ಲಿ ಏಕೆ ಸುಮ್ಮನಿದ್ದರು... ಇದೆಲ್ಲವೂ ಅವರು ಮಾಡುತ್ತಿರುವಂತೆ ತೋರುತ್ತಿದೆ. ಪ್ರತಿಪಕ್ಷದ ಜನರನ್ನು ಗುರಿಯಾಗಿಸಲು ಸಾಧ್ಯವಿರುವ ಎಲ್ಲ ತಂತ್ರಗಳನ್ನು ಬಳಸಿಕೊಂಡು ಇಡಿ ಅಧಿಕಾರಿಗಳನ್ನು ಗುರಿಯಾಗಿಸಿ, ನಾವು ಕಾನೂನುಬದ್ಧವಾಗಿ ಹೋರಾಡುತ್ತೇವೆ.

ಎಸ್‌ಸಿಪಿ-ಟಿಎಸ್‌ಪಿ ಪ್ರಕ್ರಿಯೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದರ ಬಗ್ಗೆ ಬಿಜೆಪಿಗೆ ತಿಳಿದಿಲ್ಲ. ಯಾವ ಷರತ್ತಿನ ಅಡಿಯಲ್ಲಿ ಅದನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಅಥವಾ ಬೇರೆಡೆಗೆ ತಿರುಗಿಸಲಾಗಿದೆ ಎಂದು ಅವರು ಸೂಚಿಸುತ್ತಿದ್ದಾರೆ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಇದನ್ನು ದೃಢಪಡಿಸಬಹುದು, ಆಗ ಅವರು ಇದನ್ನು ತರಲು ನಾಚಿಕೆಪಡಬೇಕು, ಅವರು 8000 ಕೋಟಿ ರೂ ನಂತರ ಅವರು ಅಂತಹ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com