ಡಿಕೆಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ; CM ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಲು ತಂತ್ರ: ಯತ್ನಾಳ್

ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ಡಿಕೆಶಿ ಆದೇಶದಂತೆ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ವಿಜಯೇಂದ್ರ ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ.
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Updated on: 

ಚಿಕ್ಕೋಡಿ: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಆದೇಶದಂತೆ ಸಿದ್ದರಾಮಯ್ಯ ರನ್ನು ಸಿಎಂ ಸ್ಥಾನದಿಂದ ಇಳಿಸಲು ವಿಜಯೇಂದ್ರ ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ. ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ಈ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್​ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು. ರಾಜೀವ್ ಯಾರ ನಿರ್ದೇಶನದ ಮೇಲೆ ಕಾಂಗ್ರೆಸ್ ಸೇರಿದ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದು ಇತ್ತೀಚೆಗೆ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದರು. ಮುಡಾ ವಿಚಾರವಾಗಿ ಬಿವೈ ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್
ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ: ಯತ್ನಾಳ್ ಬಾಂಬ್

ವಾಲ್ಮೀಕಿ ನಿಗಮದ ವಿಚಾರದ ಕುರಿತು ಪಾದಯಾತ್ರೆ ಮಾಡುತ್ತಿರುವ ಸಂಬಂಧ ಮಾತನಾಡಿರುವ ಯತ್ನಾಳ್, ನಾವು ಮತ್ತು ರಮೇಶ್ ಜಾರಕಿಹೊಳಿ‌ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ನಿರ್ಣಯವಾಗಿಲ್ಲ. ಬಿಜೆಪಿಯಲ್ಲಿ ಎರಡು ಬಣ ಇಲ್ಲ. ಮಹರ್ಷಿ ವಾಲ್ಮೀಕಿ ನಿಗಮದಲ್ಲಾದದ್ದೂ ದೊಡ್ಡ ಹಗರಣ. ಒಂದು ಸಮುದಾಯದಕ್ಕೆ ಹೋಗಬೇಕಾದ ಹಣ ಪೂರ್ತಿ ನುಂಗಿ ಹಾಕಿದ್ದಾರೆ. ಇನ್ನೊಂದು ಕಡೆ ಮುಡಾದಲ್ಲಿ ಒಬ್ಬ ದಲಿತನ ಜಮೀನು ಪೂರ್ತಿ ನುಂಗಿ ಹಾಕಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ನಾವು ಮಾಡುವ ಹೋರಾಟ ಭ್ರಷ್ಟರ ವಿರುದ್ದ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com