INDIA ಬ್ಲಾಕ್ 295 ಸೀಟು ಗೆಲ್ಲಲಿದೆ, ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗಳಿಸಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚುನಾವಣೋತ್ತರ ಸಮೀಕ್ಷೆಗಳು "ಮಾಧ್ಯಮ ಸೃಷ್ಟಿ" ಎಂದು ಹೇಳಿದ್ದು, ಇಂಡಿಯಾ ಬ್ಲಾಕ್ 295ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಕ್ಸಿಟ್ ಪೋಲ್‌ಗಳ ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ಸಮೀಕ್ಷೆ ಎಂದು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಸಿಎಂ, ರಾಜ್ಯದ 28 ಸ್ಥಾನಗಳಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರತಿಪಾದಿಸಿದ್ದಾರೆ.
ರಾಹುಲ್ ಗಾಂಧಿ ಭಾನುವಾರ ಎಕ್ಸಿಟ್ ಪೋಲ್‌ಗಳನ್ನು "ಮೋದಿ ಮಾಧ್ಯಮ ಸಮೀಕ್ಷೆ" ಎಂದು ಟೀಕಿಸಿದ್ದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಈಗಾಗಲೇ ರಾಹುಲ್ ಗಾಂಧಿ ಅವರು ಎಕ್ಸಿಟ್ ಪೋಲ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. ಅವರು ಇದನ್ನು ಮೋದಿ ಮಾಧ್ಯಮ ಸಮೀಕ್ಷೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ, ನಾವು 15-20 ಸ್ಥಾನಗಳನ್ನು ಗೆಲ್ಲುತ್ತೇವೆ" ಎಂದರು.
"ಮಲ್ಲಿಕಾರ್ಜುನ ಖರ್ಗೆ(ಕಾಂಗ್ರೆಸ್ ಅಧ್ಯಕ್ಷ) ಅವರು ದೇಶಾದ್ಯಂತ ಇಂಡಿಯಾ ಬ್ಲಾಕ್ 295 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದಾರೆ. ನಾನು ಅದನ್ನು ಬೆಂಬಲಿಸುತ್ತೇನೆ" ಎಂದು ಅವರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ