ಮೈಸೂರು- ಕೊಡಗು ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನ ಲಕ್ಷ್ಮಣ್ ವಿರುದ್ಧ ಗೆದ್ದು ಬೀಗಿದ ಯದುವೀರ್ ಒಡೆಯರ್​

ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.
ಯದುವೀರ್ ಒಡೆಯರ್
ಯದುವೀರ್ ಒಡೆಯರ್
Updated on

ಮೈಸೂರು: ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ಸಿನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ಸಿನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ.

ಯದುವೀರ್ ಒಡೆಯರ್
ರಾಜಧರ್ಮದಲ್ಲಿ ನಂಬಿಕೆಯಿದೆ, ಸಂವಿಧಾನ- ಕಾನೂನಿನ ಮುಂದೆ ನಾನು ಸಾಮಾನ್ಯ ಮನುಷ್ಯ: ಯದುವೀರ್ (ಸಂದರ್ಶನ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com