
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯುಂಟಾಗಿದೆ.
ಸುಧಾಕರ್ ಅವರು ರಕ್ಷಾ ರಾಮಯ್ಯ ವಿರುದ್ಧ 1,12,866 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸುಧಾಕರ್ ಅವರಿಗೆ ಒಟ್ಟಾರೆ 5,89,918 ಮತಗಳು ಸಿಕ್ಕಿದ್ದು, ರಕ್ಷಾ ರಾಮಯ್ಯ ಅವರಿಗೆ 4,77,052 ಮತಗಳು ಸಿಕ್ಕಿವೆ.
1962ರಿಂದ ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿಯಿಂದ ಎರಡು ಬಾರಿ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿತ್ತು. ಈ ಬಾರಿ ಮತ್ತೆ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಶತಾಯಗತಾಯ ಯತ್ನ ನಡೆಸಿದಾತರೂ ಕ್ಷೇತ್ರ ಕೊನೆಗೂ ಕಮಲಪಾಳಯದ ಪಾಲಾಗಿದೆ.
Advertisement