
ಬೆಂಗಳೂರು: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.
26 ವರ್ಷದ ಸಾಗರ್ ಕರ್ನಾಟಕದಲ್ಲಿ ಕಣದಲ್ಲಿರುವ ಅತ್ಯಂತ ಕಿರಿಯ ಅಭ್ಯರ್ಥಿಯಾಗಿದ್ದು, 65,509 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಾಗರ್ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ.
ಬಿಜೆಪಿಯಿಂದ ಟಿಕೆಟ್ ಘೋಷಣೆಗೂ ಮುನ್ನ ಖೂಬಾ ತೀವ್ರ ಆಂತರಿಕ ವಿರೋಧ ಎದುರಿಸಿದ್ದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮುನ್ನಡೆ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಮಾಜಿ ಐಐಎಂ ಅಧ್ಯಾಪಕ ಪ್ರೊ. ಎಂ ರಾಜೀವ್ ಗೌಡ ಕಣದಲ್ಲಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಮುನ್ನಡೆ
ಬೆಳಗಾವಿ ಲೋಕಸಭಾ ಕ್ಷೇತ್ರದ 6ನೇ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು 73,631 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಶೆಟ್ಟರ್ ಅವರು ಕಾಂಗ್ರೆಸ್‌ನಿಂದ ಮೃಣಾಲ್ ಹೆಬ್ಬಾಳ್ಕರ್ ಎದುರು ಸ್ಪರ್ಧಿಸಿದ್ದರು. ಮೃಣಾಲ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ. ಒಂದು ವೇಳೆ ಶೆಟ್ಟರ್ ಈ ಚುನಾವಣೆಯಲ್ಲಿ ಸೋಲು ಕಂಡರೆ ಅವರ ರಾಜಕೀಯ ಜೀವನವನ್ನೇ ಅಂತ್ಯಗೊಳಿಸುತ್ತದೆ ಎನ್ನುವ ಕಾರಣಕ್ಕೆ ಈ ಸ್ಪರ್ಧೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Advertisement