'ಕೈ' ಹಿಡಿದ ಕಲ್ಯಾಣ ಕರ್ನಾಟಕ: 5 ಕ್ಷೇತ್ರಗಳೂ ಕಾಂಗ್ರೆಸ್ ಪಾಲು; ಮುಜುಗರ ತಪ್ಪಿಸಿದ ಖರ್ಗೆ ತವರು ಕ್ಷೇತ್ರ!

ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ 2024 ಪ್ರಕಟವಾಗಿದ್ದು, ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆದ್ದಿರುವ 9 ಸ್ಥಾನಗಳ ಪೈಕಿ 5 ಸ್ಥಾನಗಳು ಕಲ್ಯಾಣ ಕರ್ನಾಟಕದಲ್ಲಿ ಆಗಿದೆ.
ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
Updated on

ಕಲಬುರಗಿ: ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ 2024 ಪ್ರಕಟವಾಗಿದ್ದು, ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆದ್ದಿರುವ 9 ಸ್ಥಾನಗಳ ಪೈಕಿ 5 ಸ್ಥಾನಗಳು ಕಲ್ಯಾಣ ಕರ್ನಾಟಕದಲ್ಲಿ ಆಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿರುವಲ ಐದಕ್ಕೂ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಈ ಮೂಲಕ ಕಾಂಗ್ರೆಸ್ ಪಕ್ಷಕ್ಕಾಗುತ್ತಿದ್ದ ಮುಜುಗರವನ್ನು ಮಲ್ಲಿಕಾರ್ಜುನ ಖರ್ಗೆಯವರ ತವರು ಕ್ಷೇತ್ರ ತಪ್ಪಿಸಿದೆ.

2019 ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಈ ಐದು ಸ್ಥಾನದಲ್ಲಿ ಗೆದ್ದಿತ್ತು. ಈ ಬಾರಿಯೂ ಕಾಂಗ್ರೆಸ್​ ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಈ ಗೆಲುವಿನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆನೆ ಬಲ ಸಿಕ್ಕಂತಾಗಿದೆ.

ಉಪಚುನಾವಣೆ ನಡೆದ ಶೋರಾಪುರ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ಸಿಎಂ ತವರಲ್ಲೇ ಕಾಂಗ್ರೆಸ್'ಗೆ ಮುಖಭಂಗ: 'ದಳಪತಿ'ಗಳ ಜೊತೆಗೂಡಿ ಒಕ್ಕಲಿಗರ ಮನಗೆದ್ದ BJP!

ಬೀದರ್‌ನಲ್ಲಿ ಕಾಂಗ್ರೆಸ್‌ನ ಸಾಗರ್ ಖಂಡ್ರೆ 6,66,317 ಮತಗಳನ್ನು ಪಡೆದರೆ, ಬಿಜೆಪಿಯ ಭಗವಂತ ಖೂಬಾ 5,37,442 ಮತಗಳನ್ನು ಪಡೆದಿದ್ದಾರೆ.

ಗುಲ್ಬರ್ಗದಲ್ಲಿ ಕಾಂಗ್ರೆಸ್‌ನ ರಾಧಾಕೃಷ್ಣ ದೊಡ್ಮನಿ ಅವರು ಬಿಜೆಪಿಯ ಡಾ.ಉಮೇಶ್ ಜಾಧವ್ ಅವರನ್ನು 28,811 ಮತಗಳ ಅಂತರದಿಂದ ಸೋಲಿಸಿದ್ದಾರೆ. ದೊಡ್ಮನಿ 6,53,124 ಮತಗಳನ್ನು ಪಡೆದರೆ, ಜಾಧವ್ 6,24,313 ಮತಗಳನ್ನು ಪಡೆದಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್‌ನ ಇ ತುಕಾರಾಂ ಅವರು ಮಾಜಿ ಸಚಿವ ಬಿ ಶ್ರೀರಾಮಲು ಅವರನ್ನು 98,992 ಮತಗಳ ಅಂತರದಿಂದ ಸೋಲಿಸಿದ್ದಾರೆ.

ರಾಯಚೂರಿನಲ್ಲಿ (ಎಸ್‌ಟಿ ಮೀಸಲು) ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ್ ನಾಯಕ್ ಅವರು ಬಿಜೆಪಿಯ ರಾಜಾ ಅಮರೇಶ್ವರ ನಾಯಕ್ ಅವರನ್ನು 79,781 ಮತಗಳ ಅಂತರದಿಂದ ಸೋಲಿಸಿದ್ದಾರೆ. ಕುಮಾರ್ ನಾಯಕ್ 6,70,966 ಮತಗಳನ್ನು ಪಡೆದರೆ, ಅಮರೇಶ್ವರ ನಾಯಕ್ 5,91,185 ಮತಗಳನ್ನು ಪಡೆದಿದ್ದಾರೆ.

ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ರಾಷ್ಟ್ರ ರಾಜಕಾರಣಕ್ಕೆ ದಕ್ಷಿಣ ರಾಜ್ಯಗಳಲ್ಲೇ ಅತಿ ಹೆಚ್ಚು BJP ಸಂಸದರನ್ನು ಕೊಟ್ಟ ಕರ್ನಾಟಕ: ಮತ ಗಳಿಕೆಯಲ್ಲೂ ಸಿಂಹಪಾಲು!

ಕೊಪ್ಪಳದಲ್ಲಿ ಕಾಂಗ್ರೆಸ್‌ನ ಕೆ.ರಾಜಶೇಖರ್ ಬಸವರಾಜ್ ಹಿಟ್ನಾಳ್ ಅವರು ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಅವರನ್ನು 46,357 ಮತಗಳಿಂದ ಸೋಲಿಸಿದ್ದಾರೆ. ಹಿಟ್ನಾಳ್ 6,63,511 ಮತಗಳನ್ನು ಪಡೆದರೆ, ಡಾ.ಬಸವರಾಜ್ 6,17,154 ಮತಗಳನ್ನು ಪಡೆದಿದ್ದಾರೆ.

ಈ ಬಾರಿ ಕಾಂಗ್ರೆಸ್ ಮೂವರು ಹೊಸ ಮುಖಗಳನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಿತ್ತು. ಅವರೆಲ್ಲರೂ ಬೀದರ್, ಗುಲ್ಬರ್ಗ ಮತ್ತು ರಾಯಚೂರು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ.

ಗುಲ್ಬರ್ಗದಲ್ಲಿ ಕಾಂಗ್ರೆಸ್ ಪಕ್ಷವು ಖರ್ಗೆ ಅವರ ಅಳಿಯ ದೊಡ್ಮನಿ ಅವರನ್ನು ಕಣಕ್ಕಿಳಿಸಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಜಾಧವ್ ಖರ್ಗೆ ಅವರನ್ನು 95,452 ಮತಗಳ ಅಂತರದಿಂದ ಸೋಲಿಸಿದ್ದರು.

26 ವರ್ಷ ವಯಸ್ಸಿನ ಸಾಗರ್, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ಅಭ್ಯರ್ಥಿಯಾಗಿದ್ದಾರೆ. 2019 ರಲ್ಲಿ ಖೂಬಾ ಅವರಿಂದ 1,16,834 ಮತಗಳ ಅಂತರದಿಂದ ಸೋಲಿಸಲ್ಪಟ್ಟ ತಮ್ಮ ತಂದೆ ಈಶ್ವರ್ ಖಂಡ್ರೆ ಅವರ ಸೋಲಿಗೆ ಸಾಗರ್ ಸೇಡು ತೀರಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com