ಶತ್ರು ಭೈರವಿ ಯಾಗ ಮಾಡಿ ಚುನಾವಣೆ ಗೆದ್ದಿಲ್ಲ: ಡಿಕೆಶಿಗೆ HDK ತಿರುಗೇಟು

ಜನರ ಹಾಗೂ ಜೆಡಿಎಸ್-ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.
ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಜನರ ಹಾಗೂ ಜೆಡಿಎಸ್-ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ಮಂಡ್ಯ ಲೋಕಸಭೆ ಫಲಿತಾಂಶದ ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ತಿರುಗೇಟು ಕೊಟ್ಟರು.

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರಿಗೂ ಕುಟುಕಿದರು.

ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ಕೇರಳದಲ್ಲಿ ನನ್ನ ಮತ್ತು ಸಿಎಂ ವಿರುದ್ಧ 'ಶತ್ರು ಭೈರವಿ ಯಾಗ', ಐದು ರೀತಿಯ ಪ್ರಾಣಿಗಳ ಬಲಿ: ಡಿಕೆ ಶಿವಕುಮಾರ್

ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರೂ ನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದೆ. ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ ಎಂದು ಹೇಳಿದರು.

ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯಗಳಿಸಿದ್ದಾರೆ. ಜನರು ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com