
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಲಬುರಗಿ ನಗರದ ಗುಲಬರ್ಗಾ ವಿ.ವಿ.ಯ ಸಾದ್ವಿ ಶಿರೋಮಣಿ ಸಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಿಗ್ಗೆ 11 ಗಂಟೆ ವರೆಗೂ ನಿರಂತರವಾಗಿ ನಡೆಯಿತು.
ಕೊನೆಯದಾಗಿ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ನಂತರ ವಿನ್ನಿಂಗ್ ಕೋಟಾ ತಲುಪದಿದ್ದರೂ ಕೊನೆಯ ಇಬ್ಬರು ಸ್ಪರ್ಧಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಮತ ಪಡೆದ ಕಾರಣ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಅವರು ಡಾ. ಚಂದ್ರಶೇಖರ ಪಾಟೀಲ ಅವರಿಗೆ ಗೆಲುವಿನ ಪ್ರಮಾಣ ಪತ್ರ ವಿತರಿಸುವ ಮೂಲಕ ಅಧಿಕೃತವಾಗಿ ಫಲಿತಾಂಶವನ್ನು ಘೋಷಿಸಿದರು.
Advertisement