ದೆಹಲಿಯಲ್ಲಿ ಬೀಡು ಬಿಟ್ಟ ಕುಮಾರಸ್ವಾಮಿ: ಶೀಘ್ರವೇ ರಾಷ್ಟ್ರ ರಾಜಧಾನಿಗೆ HDK ಕುಟುಂಬ ಪ್ರಯಾಣ!

ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಸಂಜೆ ನವದೆಹಲಿ ತಲುಪಿದ್ದಾರೆ. ಎನ್‌ಡಿಎ ನೇತೃತ್ವದ ಹೊಸ ಸರ್ಕಾರದ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸುತ್ತಿರುವ ಕಾರಣ ಅವರು ಮುಂದಿನ ಕೆಲವು ದಿನಗಳವರೆಗೆ ಅಲ್ಲಿಯೇ ಉಳಿಯುವ ನಿರೀಕ್ಷೆಯಿದೆ.
ಎಚ್.ಡಿ ಕುಮಾರಸ್ವಾಮಿ ಕುಟುಂಬ(ಸಂಗ್ರಹ ಚಿತ್ರ)
ಎಚ್.ಡಿ ಕುಮಾರಸ್ವಾಮಿ ಕುಟುಂಬ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಸಂಜೆ ನವದೆಹಲಿ ತಲುಪಿದ್ದಾರೆ. ಎನ್‌ಡಿಎ ನೇತೃತ್ವದ ಹೊಸ ಸರ್ಕಾರದ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸುತ್ತಿರುವ ಕಾರಣ ಅವರು ಮುಂದಿನ ಕೆಲವು ದಿನಗಳವರೆಗೆ ಅಲ್ಲಿಯೇ ಉಳಿಯುವ ನಿರೀಕ್ಷೆಯಿದೆ.

ಕುಮಾರಸ್ವಾಮಿ ಗುರುವಾರ ಸೆಂಟ್ರಲ್ ಹಾಲ್ ನಲ್ಲಿ ಎನ್ ಡಿಎ ಸಭೆಯಲ್ಲಿ ಭಾಗವಹಿಸಿದ್ದರು. ಕುಮಾರಸ್ವಾಮಿ ಜೊತೆ ಜೆಡಿಎಸ್ ಮುಖಂಡರಾದ ಸಾ.ರಾ.ಮಹೇಶ್ ಹಾಗೂ ಜೆಡಿಎಸ್ ಸದಸ್ಯರು ಪಾಲ್ಗೊಂಡಿದ್ದರು.

ಕರ್ನಾಟಕದಲ್ಲಿ ಬಿಜೆಪಿಗೆ ಸುಮಾರು ಒಂಬತ್ತರಿಂದ ಹತ್ತು ಸ್ಥಾನಗಳನ್ನು ಗೆಲ್ಲುವಲ್ಲಿ ಅವರ ಪಾತ್ರಕ್ಕಾಗಿ ಅವರಿಗೆ ಪ್ರಮುಖ ಸಚಿವ ಸ್ಥಾನ ನೀಡಬೇಕು ಎಂದು ಜೆಡಿಎಸ್ ನಾಯಕರು ಹೇಳಿದ್ದಾರೆ. ಮಾಜಿ ಪ್ರಧಾನಿ ಹಾಗೂ ಕುಮಾರಸ್ವಾಮಿ ತಂದೆ ಎಚ್‌ಡಿ ದೇವೇಗೌಡ, ಪತ್ನಿ ಅನಿತಾ, ಮಗ ನಿಖಿಲ್, ಸೊಸೆ ರೇವತಿ ಮತ್ತು ಮೊಮ್ಮಗ ನವದೆಹಲಿಯಲ್ಲಿ ಅವರ ಜೊತೆ ಸೇರಲಿದ್ದಾರೆ.

ಜೆಡಿಎಸ್ ಮತಗಳು ಅನಾಯಾಸವಾಗಿ ಬಿಜೆಪಿಗೆ ವರ್ಗಾವಣೆಯಾದ ಕಾರಣ ಬಿಜೆಪಿ-ಜೆಡಿಎಸ್ ಮೈತ್ರಿ ದಕ್ಷಿಣ ಭಾಗದಲ್ಲಿ ಉತ್ತಮವಾಗಿ ಕೆಲಸ ಮಾಡಿದೆ. ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಮೈಸೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಅನಾಯಾಸವಾಗಿ ಗೆದ್ದಿರುವುದೇ ಸಾಕ್ಷಿ, ಮತ ವರ್ಗಾವಣೆ ಕೆಲಸ ಮಾಡಿದೆ ಎಂಬುದಕ್ಕೆ ಸಾಕ್ಷಿ. ಇಲ್ಲದಿದ್ದರೆ ಉತ್ತರ ಕರ್ನಾಟಕದಲ್ಲಿ ಕೇವಲ ಏಳು ಸೀಟುಗಳನ್ನು ಗೆದ್ದಿರುವ ಬಿಜೆಪಿ, ದಕ್ಷಿಣ ಕರ್ನಾಟಕದಲ್ಲಿ ಇಷ್ಟೊಂದು ಸ್ಥಾನ ಗಳಿಸಿದ್ದು ಹೇಗೆ? ಎಂಬುದು ವಿಶ್ಲೇಷಕರ ಪ್ರಶ್ನೆ.

ಎಚ್.ಡಿ ಕುಮಾರಸ್ವಾಮಿ ಕುಟುಂಬ(ಸಂಗ್ರಹ ಚಿತ್ರ)
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!

ಬಿಜೆಪಿ-ಜೆಡಿಎಸ್ ಗೆಲುವಿನ ಮುನ್ನಡೆಗಳು ಜೆಡಿಎಸ್ ಮತ ವರ್ಗಾವಣೆ ಮನವರಿಕೆಯಾಗಿದೆ ಎಂದು ತೋರಿಸುತ್ತದೆ. ಬಹುತೇಕ ಕಾಂಗ್ರೆಸ್ ನಾಯಕರು ಅಲ್ಪ ಮತಗಳ ಅಂತರದಿಂದ ಗೆದ್ದರೆ, ಬಿಜೆಪಿ-ಜೆಡಿಎಸ್ ನ ಹಲವು ನಾಯಕರು 2ರಿಂದ 3 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ.ಎನ್.ಮಂಜುನಾಥ್ 2.69 ಲಕ್ಷ ಮತಗಳಿಂದ, ಚಿಕ್ಕಬಳ್ಳಾಪುರದಲ್ಲಿ ಡಾ. ಕೆ.ಸುಧಾಕರ್ ಗೆಲುವಿನ ಅಂತರ 1.63 ಲಕ್ಷ, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ 2.59 ಲಕ್ಷ, ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ 2.4 ಲಕ್ಷ, ಮೈಸೂರು ಕೊಡಗು ಅಭ್ಯರ್ಥಿ ಯದುವೀರ್ ಒಡೆಯರ್ 1.39 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇಬ್ಬರು ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ನೀಲಿ ಕಣ್ಣಿನ ಹುಡುಗ ಪ್ರಲ್ಹಾದ್ ಜೋಶಿ ಕೂಡ ಮೋದಿ 3.0 ಸಂಪುಟದಲ್ಲಿ ಮಂತ್ರಿಯಾಗುವ ಸಾಧ್ಯತೆಯಿದೆ.

ಕುಮಾರಸ್ವಾಮಿ ಅವರು ಯಾವುದೇ ನಿರ್ದಿಷ್ಟ ಮಂತ್ರಿಗಿರಿಗಾಗಿ ಲಾಬಿ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜೆಡಿಎಸ್ ನಾಯಕರು, ಅವರು ಎಂದಿಗೂ ಹಾಗೆ ಮಾಡುವುದಿಲ್ಲ. ಅವರು ಎನ್‌ಡಿಎ ನಾಯಕತ್ವವನ್ನು ನಂಬುತ್ತಾರೆ ಮತ್ತು ಬಿಜೆಪಿ ಗೆಲ್ಲಲು ಜೆಡಿಎಸ್ ಕಾರ್ಯಕರ್ತರು ರಾಜ್ಯಾದ್ಯಂತ ಮಾಡಿರುವ ಪ್ರಯತ್ನಗಳು ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com