ಲೋಕಸಭಾ ಚುನಾವಣೆ 2024: ಕರ್ನಾಟಕ ಫಲಿತಾಂಶ ಕುರಿತು ಪರಾಮರ್ಶನೆಗೆ ಪ್ರತ್ಯೇಕ ಸಭೆ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದು!

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ನವದೆಹಲಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೆಲವು ರಾಜ್ಯಗಳಲ್ಲಿ ವಿಶೇಷವಾಗಿ ಕರ್ನಾಟಕ ಫಲಿತಾಂಶ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ನವದೆಹಲಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೆಲವು ರಾಜ್ಯಗಳಲ್ಲಿ ವಿಶೇಷವಾಗಿ ಕರ್ನಾಟಕ ಫಲಿತಾಂಶ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, ರಾಜ್ಯಗಳಲ್ಲಿ ಪಕ್ಷದ ಸಾಧನೆಯನ್ನು ಪ್ರತ್ಯೇಕವಾಗಿ ಚರ್ಚಿಸಲು ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಸಭೆ ನಡೆಸಲಿದೆ ಎಂದು ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ/ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರು ಗ್ರಾಮೀಣ ಪ್ರದೇಶದಲ್ಲಿ ಪಕ್ಷವನ್ನು ಬೆಂಬಲಿಸಿದ್ದಾರೆ, ಆದರೆ, ನಗರವಾಸಿಗಳು ಬೆಂಬಲಿಸಿಲ್ಲ. ಈ ಮತದಾರರ ಸೆಳೆಯಲು ಪ್ರಯತ್ನಗಳ ಅಗತ್ಯವಿದೆ ಎಂದು ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ಪಕ್ಷದ ಫಲಿತಾಂಶಗಳನ್ನು ವಿಶ್ಲೇಷಿಸಲು ಖರ್ಗೆ ಸಮಿತಿಗಳನ್ನು ರಚಿಸಲಿದ್ದಾರೆಂದು ಹೇಳಿದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಕ್ತಿ ಹೆಚ್ಚಾಗಿದ್ದು, ಕಳಪೆ ಪ್ರದರ್ಶನ ನೀಡಿದ ನಾಯಕರ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ಸಂಗ್ರಹ ಚಿತ್ರ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು: ಡಿಸಿಎಂ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪುನಾರಚನೆ ಮಾಡುವಂತೆ ಹೈಕಮಾಂಡ್ ಸೂಚಿಸುವ ಸಾಧ್ಯತೆಗಳಿವೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಹೊಂದಿದ್ದರೂ ಬಿಜೆಪಿ ಅಭ್ಯರ್ಥಿಗಳೊಂದಿಗೆ ಕೈಜೋಡಿಸಿ ಕೆಲಸ ಮಾಡಿದ ಕೆಲವು ಸಚಿವರನ್ನು ಕೈಬಿಡುವ ಸಾಧ್ಯತೆಗಳೂ ಇವೆ ಎಂದು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಡಬ್ಲ್ಯುಸಿ ಸಭೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಲೇ ಇಲ್ಲ.

ಉಭಯ ನಾಯಕರು ರಾಷ್ಟ್ರ ರಾಜಧಾನಿಯಿಂದ ಹಿಂದಿರುಗಿದ ನಂತರ ಹೈಕಮಾಂಡ್ ಸಲಹೆಯಂತೆ ಸಂಪುಟದ 18 ಸಚಿವರ ಕಾರ್ಯಕ್ಷಮತೆ ಸೇರಿದಂತೆ ರಾಜ್ಯದ ಲೋಕಸಭಾ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿಕೆ ಹರಿಪ್ರಸಾದ್, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದವರಲ್ಲಿ ಒಬ್ಬರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com