''ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ'': ಹಣ ಹಿಂತಿರುಗಿಸುವಂತೆ ತೆಲಂಗಾಣ ಸಿಎಂ Revanth Reddyಗೆ JDS ಪತ್ರ

ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿದಂತೆ ಜಾತ್ಯಾತೀತ ಜನತಾದಳ ತೆಲಂಗಾಣ ಸಿಎಂಗೆ ರೇವಂತ್ ರೆಡ್ಡಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕೂಡಲೇ ಹಣ ವಾಪಸ್ ಮಾಡುವಂತೆ ಆಗ್ರಹಿಸಿದೆ.
JDS wrote a letter to Telangana Chief Minister Revanth Reddy
ತೆಲಂಗಾಣ ಸಿಎಂ Revanth Reddyಗೆ JDS ಪತ್ರ
Updated on

ಬೆಂಗಳೂರು: ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿದಂತೆ ಜಾತ್ಯಾತೀತ ಜನತಾದಳ ತೆಲಂಗಾಣ ಸಿಎಂಗೆ ರೇವಂತ್ ರೆಡ್ಡಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕೂಡಲೇ ಹಣ ವಾಪಸ್ ಮಾಡುವಂತೆ ಆಗ್ರಹಿಸಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಹೈದರಾಬಾದ್​ನ ಸಹಕಾರಿ ಬ್ಯಾಂಕ್​ ಒಂದಕ್ಕೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್​​ ತೆಲಂಗಾಣ ಮುಖ್ಯಮಂತ್ರಿ ರೇವಂತ್​ ರೆಡ್ಡಿ ಅವರಿಗೆ ಪತ್ರ ಬರೆದಿದೆ.

ವಾಲ್ಮೀಕಿ ಸಮುದಾಯದ ಹಣವನ್ನು ಹಿಂತಿರುಗಿಸುವಂತೆ ಮನವಿ ಮಾಡಿದೆ. ನಮ್ಮ ರಾಜ್ಯದ ಹಣವನ್ನು ಹಿಂತಿರುಗಿಸಿ ಕೊಡಿ ಜೆಡಿಎಸ್ ರೇವಂತ್ ರೆಡ್ಡಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದೆ.

JDS wrote a letter to Telangana Chief Minister Revanth Reddy
ಮಹರ್ಷಿ ವಾಲ್ಮೀಕಿ ನಿಗಮದ ಅವ್ಯವಹಾರ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿ ಮಾಡಿರುವ ಮಹಾನ್ ಭ್ರಷ್ಟಾಚಾರ: ಬಿಜೆಪಿ

SIT ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಹೈದರಾಬಾದ್​​ನ ಫಸ್ಟ್​ ಫೈನಾನ್ಸ್​ ಸಹಕಾರಿ ಬ್ಯಾಕ್​​​ಗೆ ವರ್ಗಾವಣೆಯಾಗಿದೆ ಎಂಬುವುದು ವಿಶೇಷ ತನಿಖಾ ದಳ (SIT) ಅಧಿಕಾರಿಗಳ ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಹೈದರಾಬಾದ್​ಗೆ ತೆರಳಿದ್ದು, ಸಹಕಾರಿ ಬ್ಯಾಂಕ್​ನಲ್ಲಿ ನಿಗಮದ 45 ಕೋಟಿ ರೂ. ಹಣ ಜಪ್ತಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್​ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿಯವರಿಗೆ ಪತ್ರ ಬರೆದಿದೆ.

ಪತ್ರದಲ್ಲೇನಿದೆ?

ಜೆಡಿಎಸ್ ಬರೆದಿರುವ ಪತ್ರದಲ್ಲಿ, “ಗುಂಡಿಗೆ ಹೋದ ಹೆಣ, ರಾಜ್ಯ ಕಾಂಗ್ರೆಸ್​ ನುಂಗಿದ ಹಣ ಎಂದಿಗೂ ವಾಪಸ್​ ಬರುವುದಿಲ್ಲ ಎಂಬುದು ತಿಳಿದಿದ್ದರೂ ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕನ್ನಡಿಗರ ಪತ್ರ” ಎಂದು ಉಲ್ಲೇಖಿಸಿ ಪತ್ರ ಬರೆದಿದೆ.

“ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಅಣತಿಯಂತೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.

ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.”

JDS wrote a letter to Telangana Chief Minister Revanth Reddy
ಮಹರ್ಷಿ ವಾಲ್ಮೀಕಿ ನಿಗಮ ಅವ್ಯವಹಾರ: ಕರ್ನಾಟಕ ಸರ್ಕಾರ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ?: ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ

“ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ.” ಎಂದು ಪತ್ರ ಬರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com