ಎರಡು ಬಾರಿ ಕರ್ನಾಟಕ ಮುಖ್ಯಮಂತ್ರಿ ಹುದ್ದೆಯಿಂದ ಕೇಂದ್ರ ಸಚಿವ ಸ್ಥಾನದವರೆಗೆ: ಮತ್ತೊಮ್ಮೆ ಚಾಣಾಕ್ಷತೆ ಪ್ರದರ್ಶಿಸಿದ ಕುಮಾರಸ್ವಾಮಿ!

ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ, ಐದು ಬಾರಿ ಶಾಸಕರಾಗಿದ್ದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗುವ ಮೂಲಕ ರಾಜಕೀಯ ಚಾಣಾಕ್ಷತೆಯನ್ನು ಪ್ರದರ್ಶಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ, ಐದು ಬಾರಿ ಶಾಸಕರಾಗಿದ್ದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗುವ ಮೂಲಕ ರಾಜಕೀಯ ಚಾಣಾಕ್ಷತೆಯನ್ನು ಪ್ರದರ್ಶಿಸಿದ್ದಾರೆ. ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾದ ನಂತರ ವಿಧಾನಸಭೆಯಲ್ಲಿ ಸೋತು ಕಮರಿ ಹೋಗಿದ್ದ ಜೆಡಿಎಸ್ ಗೆ ಈ ಮೂಲಕ ಮರುಜೀವ ಸಿಕ್ಕಂತಾಗಿದೆ.

1999ರಲ್ಲಿ ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಜಾತ್ಯತೀತ ಜನತಾದಳ ಸ್ವಂತ ಬಲದಿಂದ ಇದುವರೆಗೆ ಸರ್ಕಾರ ರಚಿಸಿಲ್ಲ, ಆದರೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚಿಸಿತ್ತು. 2006ರ ಫೆಬ್ರವರಿಯಲ್ಲಿ ಬಿಜೆಪಿ ಜೊತೆ ಸೇರಿಕೊಂಡು ಸರ್ಕಾರ ರಚಿಸಿ 20 ತಿಂಗಳು ಇದ್ದರೆ, 2018ರಲ್ಲಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿ 14 ತಿಂಗಳು ಆಳ್ವಿಕೆ ನಡೆಸಿತ್ತು. ಈ ಎರಡೂ ಸಂದರ್ಭಗಳಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಗ ಈಗ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷವನ್ನು ಮುನ್ನಲೆಗೆ ತಂದು ಕೇಂದ್ರದಲ್ಲಿ ಸಂಪುಟ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಮಾಜಿ ಸಿಎಂ ಜೆಡಿಎಸ್‌ನ ಭದ್ರಕೋಟೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಪಕ್ಷವು ಇನ್ನೂ ರಾಜಕೀಯವಾಗಿ ಪರಿಗಣನೆಗೆ ತೆಗೆದುಕೊಳ್ಳುವ ಸ್ಥಾನದಲ್ಲಿದೆ ಎಂಬುದು ತೋರಿಸಿಕೊಂಡಿದೆ.

ಹೆಚ್ ಡಿ ಕುಮಾರಸ್ವಾಮಿ
Modi 3.0: ಸಂಪುಟ ದರ್ಜೆ ಸಚಿವರಾಗಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಸ್ಟಾರ್ ಚಂದ್ರು ಅವರನ್ನು 2,84,620 ಮತಗಳ ಅಂತರದಿಂದ ಸೋಲಿಸಿದ್ದಾರೆ. ರಾಜ್ಯ ಜೆಡಿಎಸ್ ಅಧ್ಯಕ್ಷರೂ ಆಗಿರುವ ಕುಮಾರಸ್ವಾಮಿ ಅವರು ಐದು ಬಾರಿ ಶಾಸಕರಾಗಿ ಇತ್ತೀಚಿನವರೆಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ತೀರ್ಪು ಹೊರಬಿದ್ದು, ಮೂರನೇ ಬಾರಿಗೆ ತಾವೇ ಕಿಂಗ್‌ಮೇಕರ್ ಅಥವಾ ‘ಕಿಂಗ್’ ಆಗಿ ಹೊರಹೊಮ್ಮಲಿದ್ದೇವೆ ಎಂದು ಕುಮಾರಸ್ವಾಮಿ ಭಾವಿಸಿದ್ದರು. ಆದರೆ ಅವರ ಪಕ್ಷದ ಹೀನಾಯ ಸೋಲು ಮತ್ತು ಕಾಂಗ್ರೆಸ್‌ನ ಅಮೋಘ ಗೆಲುವಿನಿಂದ ಅವರ ಕನಸುಗಳು ಭಗ್ನಗೊಂಡಿದ್ದವು.

ರಾಜ್ಯದಲ್ಲಿ ತಮ್ಮ ಪಕ್ಷವನ್ನು ಉಳಿಸಿಕೊಳ್ಳುವ, ರಾಜಕೀಯವಾಗಿ ಪ್ರಸ್ತುತವಾಗಿ ಉಳಿಯುವ ಅನಿವಾರ್ಯತೆಯೊಂದಿಗೆ, ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮೈತ್ರಿ ಮಾಡಿಕೊಳ್ಳಲು ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸಿದರು. ಒಟ್ಟು 28 ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ 25 ರಲ್ಲಿ 17 ರಲ್ಲಿ ಬಿಜೆಪಿ ಮತ್ತು ಮೂರು ಸ್ಥಾನಗಳಲ್ಲಿ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಕಂಡಿತು.

ರಾಜಕೀಯದಲ್ಲಿ "ಆಕಸ್ಮಿಕ ರಾಜಕಾರಣಿ" ಎಂದು ಹೇಳುವ ಕುಮಾರಸ್ವಾಮಿಯವರ ಮೊದಲ ಒಲವು ಚಲನಚಿತ್ರಗಳ ಮೇಲೆ. ಕನ್ನಡದ ಮೇರುನಟ ಡಾ ರಾಜ್‌ಕುಮಾರ್ ಅವರ ಅಭಿಮಾನಿಯಾಗಿದ್ದ ಕುಮಾರಸ್ವಾಮಿ ಅವರು ಕಾಲೇಜು ದಿನಗಳಿಂದಲೇ ಚಿತ್ರರಂಗದತ್ತ ಆಕರ್ಷಿತರಾಗಿದ್ದರು. ಚಿತ್ರ ನಿರ್ಮಾಣ ಮತ್ತು ವಿತರಣೆಯನ್ನು ಕೈಗೆತ್ತಿಕೊಂಡರು, ಅವರ ಮಗ ನಿಖಿಲ್ ನಟಿಸಿದ 'ಜಾಗ್ವಾರ್' ಸೇರಿದಂತೆ ಹಲವಾರು ಯಶಸ್ವಿ ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದರು.

ಈ ಹಿಂದೆ 2018 ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, ನಾನು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುತ್ತೇನೆ ಎಂದು ಹೇಳಿಕೊಂಡಿದ್ದರು. ಒಕ್ಕಲಿಗ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಗಳಿಸಿಕೊಂಡಾಗ ಕರ್ನಾಟಕದಲ್ಲಿ ಒಕ್ಕಲಿಗ ಮುಖ್ಯಮಂತ್ರಿ ಹುದ್ದೆ ಮುನ್ನಲೆಗೆ ಬಂತು. ಅದು ಕಾಂಗ್ರೆಸ್ ಜೊತೆಗಿನ ಸಮ್ಮಿಶ್ರ ಸರ್ಕಾರ.

ಹೆಚ್ ಡಿ ಕುಮಾರಸ್ವಾಮಿ
ಕರ್ನಾಟಕದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ: ಕೇಂದ್ರ ಸಚಿವ HD ಕುಮಾರಸ್ವಾಮಿ

ರಾಜಕೀಯ ವಾತಾವರಣದಲ್ಲಿ ಬೆಳೆದ ಕುಮಾರಸ್ವಾಮಿ ಅವರು 1996 ರಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟರು. ಸಂಸತ್ತಿನ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಸೋತರು.

2004 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಚುನಾಯಿತರಾದರು, ಚುನಾವಣೆಯ ನಂತರ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್‌ನ ಧರಂ ಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಜೆಡಿಎಸ್ ಸೇರ್ಪಡೆಗೊಂಡಿತು. 2006 ರಲ್ಲಿ ಬಂಡಾಯವೆದ್ದು, 42 ಶಾಸಕರೊಂದಿಗೆ ಮೈತ್ರಿಯಿಂದ ಹೊರನಡೆದರು, ಅವರ ತಂದೆ ದೇವೇಗೌಡರ ಇಷ್ಟಕ್ಕೆ ವಿರುದ್ಧವಾಗಿ, ಬಿಜೆಪಿಯೊಂದಿಗೆ ಸೇರಿ ಸರ್ಕಾರವನ್ನು ರಚಿಸಿದರು, ಅವರು ಶಾಸಕರಾದ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾದರು. ಆ ಸರ್ಕಾರ 20 ತಿಂಗಳು ಮುಂದುವರಿಯಿತು.

ಹೆಚ್ ಡಿ ಕುಮಾರಸ್ವಾಮಿ
ಬಿಜೆಪಿಯಲ್ಲಿ ಕಿಚ್ಚೆಬ್ಬಿಸಿದ ಕುಮಾರ ಪರ್ವ (ಸುದ್ದಿ ವಿಶ್ಲೇಷಣೆ)

ಕೊಟ್ಟ ಮಾತಿನಂತೆ ಬಿಜೆಪಿಗೆ ಸಿಎಂ ಹುದ್ದೆ ಸರದಿ ಬಂದಾಗ, ಅಧಿಕಾರ ಹಸ್ತಾಂತರ ಮಾಡದೆ ಏಳು ದಿನಗಳಲ್ಲಿ ಯಡಿಯೂರಪ್ಪ ಸರ್ಕಾರವನ್ನು ಉರುಳಿಸಿದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. 2009 ರಲ್ಲಿ ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.

ಕುಮಾರಸ್ವಾಮಿಯವರ ರೈತಪರ ಮತ್ತು ಗ್ರಾಮೀಣ ಸ್ನೇಹಿ ಕಾರ್ಯಕ್ರಮಗಳಾದ ಕೃಷಿ ಸಾಲ ಮನ್ನಾ ಮತ್ತು ಗ್ರಾಮ ವಾಸ್ತವ್ಯ ಯೋಜನೆಯಡಿ ಗ್ರಾಮೀಣ ಜನರಿಗೆ ತಲುಪಿಸಿ ಅವರ ಸಮಸ್ಯೆಗಳನ್ನು ಅರಿತುಕೊಳ್ಳಲು ಹಳ್ಳಿಗಳಲ್ಲಿ ವಾಸ್ತವ್ಯ ಹೂಡಿದ್ದರು. ವಿಜ್ಞಾನ ಪದವೀಧರರಾಗಿರುವ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕೂಡ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದು ಮಾಜಿ ಶಾಸಕಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com