ಗ್ಯಾರಂಟಿ ಯೋಜನೆಗಳ ಪರಾಮರ್ಶೆಗೆ ಕಾಂಗ್ರೆಸ್ ಮುಖಂಡ ಆಗ್ರಹ; ಕೇಂದ್ರ ಸಚಿವ ಸಂಪುಟದಲ್ಲಿ ಜಾತಿ ತಾರತಮ್ಯ

ಕೇಂದ್ರದಲ್ಲಿ ಸಚಿವ ಸ್ಥಾನ ಹಂಚಿಕೆಯಲ್ಲಿ ಜಾತಿ ತಾರತಮ್ಯ ಎಸಗಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಅವರು ಮಂಗಳವಾರ ಟೀಕಿಸಿದ್ದಾರೆ.
ಎಂ.ಲಕ್ಷ್ಮಣ್ ಸುದ್ದಿಗೋಷ್ಠಿ
ಎಂ.ಲಕ್ಷ್ಮಣ್ ಸುದ್ದಿಗೋಷ್ಠಿ

ಮಡಿಕೇರಿ: ಕೇಂದ್ರದಲ್ಲಿ ಸಚಿವ ಸ್ಥಾನ ಹಂಚಿಕೆಯಲ್ಲಿ ಜಾತಿ ತಾರತಮ್ಯ ಎಸಗಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಅವರು ಮಂಗಳವಾರ ಟೀಕಿಸಿದ್ದಾರೆ.

“ಬಿಜೆಪಿಯು ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳಿಗೆ ಗರಿಷ್ಠ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲು ಕಾರಣವೇನು? 72 ಸಚಿವರ ಪೈಕಿ ಒಂದೇ ಸಮುದಾಯಕ್ಕೆ ಸೇರಿದ 25 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಕ್ಕೆ ಯಾವುದೇ ಸಚಿವ ಸ್ಥಾನ ನೀಡಿಲ್ಲ. ಮೋದಿ ಸಚಿವ ಸಂಪುಟ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ'' ಎಂದರು.

ಇಂದು ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂ.ಲಕ್ಷ್ಮಣ್, ಚುನಾವಣೆಯಲ್ಲಿ ತಮ್ಮ ಸೋಲಿಗೆ ತಾವೇ ಕಾರಣ ಎಂದರು. ನನಗೆ ಮತ ನೀಡಿದವರಿಗೂ ನೀಡದೇ ಇರುವವರಿಗೂ ಎಲ್ಲರಿಗೂ ಧನ್ಯವಾದ‌. ಹೊಸದಾಗಿ ಆಯ್ಕೆಯಾದ ಸಂಸದರು ಜಾತಿ ರಾಜಕಾರಣ ಬಿಟ್ಟು ಕೊಡಗಿನ ಧ್ವನಿಯಾಗಬೇಕೆಂದು ಒತ್ತಾಯಿಸಿದರು.

ಎಂ.ಲಕ್ಷ್ಮಣ್ ಸುದ್ದಿಗೋಷ್ಠಿ
ಜನರಿಗೆ ಇಷ್ಟ ಆಗಿಲ್ಲ.. ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

''ಹಿಂದಿನ ಸಂಸದರು ಜಿಲ್ಲೆಗೆ ಹೆಚ್ಚಿನ ಕೆಲಸ ಮಾಡಿಲ್ಲ. ಜಾತಿ ರಾಜಕಾರಣದಲ್ಲಿ ತೊಡಗಿದ್ದರು. ಈಗಿನ ಸಂಸದರು ಕೊಡಗಿನ ಜನರ ಬೇಡಿಕೆಗಳನ್ನು ಈಡೇರಿಸಬೇಕು' ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಲಕ್ಷ್ಮಣ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿರುವ ನ್ಯೂನತೆಯನ್ನು ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಮುಖೇನ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನು ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು, ಕಸ್ತೂರಿ ರಂಗನ್ ವರದಿ, ಕಾವೇರಿ, ಮೇಕೆದಾಟು, ಕಳಸಬಂಡೂರಿ, ಮಹದಾಯಿ,ಅಲಮಟ್ಟಿ ಸೇರಿದಂತೆ ರಾಜ್ಯದ ನೀರಾವರಿ ಸಮಸ್ಯೆ ಪರಿಹರಿಸಲಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com