Basavaraj Bommai submits his resignation
ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಶಿಗ್ಗಾವಿ: ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
Published on

ಶಿಗ್ಗಾವಿ: ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.

Basavaraj Bommai submits his resignation
ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ಇ ತುಕಾರಾಂ ರಾಜಿನಾಮೆ

ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ. ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ.

7,05,538 ಮತಗಳನ್ನು ಪಡೆದಿದ್ದ ಬಸವರಾಜ ಬೊಮ್ಮಾಯಿ ಅವರು, 43,513 ವೋಟ್​ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಜಯಿಸಿದ್ದರು. ಗಡ್ಡದೇವರಮಠ ಅವರು 6,62,025 ಮತ ಪಡೆದು ತೀವ್ರ ಪೈಪೋಟಿ ನೀಡಿದ್ದರು.

ಬೊಮ್ಮಾಯಿ ರಾಜಿನಾಮೆ ಪತ್ರ
ಬೊಮ್ಮಾಯಿ ರಾಜಿನಾಮೆ ಪತ್ರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com