ಕೇಂದ್ರದ NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರವು ಆಕಸ್ಮಿಕವಾಗಿ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರವು ಆಕಸ್ಮಿಕವಾಗಿ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ ಎಂದು ಹೇಳಿದರು.

ದೇಶವನ್ನು ಬಲಪಡಿಸಲು ನಮ್ಮ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ. ಸರ್ಕಾರ ಮುಂದುವರೆಯಬೇಕು ಮತ್ತು ದೇಶವನ್ನು ಬಲಪಡಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಬಯಸುತ್ತೇವೆ, ಆದರೆ, ಒಳ್ಳೆಯದು ಮುಂದುವರಿಯುವುದಕ್ಕೆ ಅವಕಾಶ ನೀಡದಿರುವ ಅಭ್ಯಾಸ ಪ್ರಧಾನಿಗಿದೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
NDA ಸರ್ಕಾರದಲ್ಲಿ ಮೋದಿ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಲಾಗದೇ? ಈ ವಾದದಲ್ಲಿ ಹುರುಳಿದೆಯೇ? (ತೆರೆದ ಕಿಟಕಿ)

ಈ ನಡುವೆ ಖರ್ಗೆಯವರ ಹೇಳಿಕೆಗೆ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರು 295 ಸ್ಥಾನ ಗೆಲ್ಲುವ ಬಗ್ಗೆ ಮಾತನಾಡುತ್ತಿದ್ದರು. ಫಲಿತಾಂಶ ಬಳಿಕ ನಿರಾಶೆಗೊಂಡರು. ಕೇವಲ 230 ಸ್ಥಾನವನ್ನಷ್ಟ ಪಡೆದಿತ್ತು.

ಬಿಜೆಪಿ ಹಿರಿಯ ಮುಖಂಡ ಹಾಗೂ ಸಂಸದರೊಬ್ಬರು ಮಾತನಾಡಿ, ಕಾಂಗ್ರೆಸ್‌ಗೆ ತನ್ನದೇ ಆದ ಸಮಸ್ಯೆಗಳಿದ್ದು, ಎಐಸಿಸಿ ಅಧ್ಯಕ್ಷರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ತಮ್ಮ ನಿಲುವಿನ ಅರಿವಿದ್ದರೂ ಈಗಲೂ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಕರ್ನಾಟಕದಲ್ಲಿ 28 ಲೋಕಸಭಾ ಸ್ಥಾನಗಳಲ್ಲಿ, ಆಡಳಿತಾರೂಢ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು 19 ಸ್ಥಾನಗಳನ್ನು ಗೆದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com