ಬೆಂಗಳೂರು: ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್‌ನ 19 ಸಂಸದರು ಮತ್ತು ಕೇಂದ್ರ ಸಚಿವರನ್ನು ಕರ್ನಾಟಕ ಬಿಜೆಪಿ ಘಟಕವು ಜೂನ್ 22ರಂದು ಸನ್ಮಾನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಈ ಕಾರ್ಯಕ್ರಮದಲ್ಲಿ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ರಾಜ್ಯದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳನ್ನು ಗೆದ್ದಿದ್ದರೆ, ಅದರ ಮಿತ್ರಪಕ್ಷ ಜೆಡಿಎಸ್‌ಗೆ ಎರಡು ಸ್ಥಾನಗಳು ಲಭಿಸಿವೆ. ಆಡಳಿತಾರೂಢ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.
Advertisement