ಲೋಕಸಭೆ ಚುನಾವಣೆಯಲ್ಲಿ ಗೆಲುವು: ಜಿ.ಪಂ, ತಾ.ಪಂ ಚುನಾವಣೆಯಲ್ಲೂ 'ಮೈತ್ರಿ ಕಮಾಲ್'ಗೆ ಬಿಜೆಪಿ-ಜೆಡಿಎಸ್ ತವಕ!

ರಾಜ್ಯಾದ್ಯಂತ ಎರಡೂ ಪಕ್ಷಗಳ ಪ್ರಮುಖ ನೆಲೆಗಳನ್ನು ಬಲಪಡಿಸಲು ಈ ಚುನಾವಣೆಗಳು ನಿರ್ಣಾಯಕವಾಗಿದ್ದು, ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯವರೆಗೆ ತಮ್ಮ ಮೈತ್ರಿಯನ್ನು ಮುಂದುವರೆಸುವ ಸಾಧ್ಯತೆಯನ್ನು ಪಕ್ಷಗಳು ನೀಡುತ್ತಿವೆ.
ಬಿಜೆಪಿ-ಜೆಡಿಎಸ್ ಸಂಸದರು, ಸಚಿವರಿಗೆ ಅರಮನೆ ಮೈದಾನದಲ್ಲಿ ಸನ್ಮಾನ
ಬಿಜೆಪಿ-ಜೆಡಿಎಸ್ ಸಂಸದರು, ಸಚಿವರಿಗೆ ಅರಮನೆ ಮೈದಾನದಲ್ಲಿ ಸನ್ಮಾನ
Updated on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಯಶಸ್ಸಿನ ರುಚಿ ಕಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವ ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗೆ ಸಹ ಒಟ್ಟಾಗಿ ಮುಂದುವರಿಯಲು ಸಜ್ಜಾಗಿವೆ.

ರಾಜ್ಯಾದ್ಯಂತ ಎರಡೂ ಪಕ್ಷಗಳ ಪ್ರಮುಖ ನೆಲೆಗಳನ್ನು ಬಲಪಡಿಸಲು ಈ ಚುನಾವಣೆಗಳು ನಿರ್ಣಾಯಕವಾಗಿದ್ದು, ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯವರೆಗೆ ತಮ್ಮ ಮೈತ್ರಿಯನ್ನು ಮುಂದುವರೆಸುವ ಸಾಧ್ಯತೆಯನ್ನು ಪಕ್ಷಗಳು ನೀಡುತ್ತಿವೆ. ಮುಂಬರುವ ಚುನಾವಣೆಗೆ ತಯಾರಿ ನಡೆಸುತ್ತಿರುವ ಆಡಳಿತಾರೂಢ ಕಾಂಗ್ರೆಸ್‌ನ್ನು ಮಣಿಸಲು ಎರಡೂ ಪಕ್ಷಗಳು ಪಣ ತೊಟ್ಟಿವೆ.

ಐವರು ಸಚಿವರು ಸೇರಿದಂತೆ 19 ಎನ್‌ಡಿಎ ಸಂಸದರಿಗೆ ರಾಜ್ಯ ಬಿಜೆಪಿ ಘಟಕವು ನಿನ್ನೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಎರಡು ಪಕ್ಷಗಳ ಭವಿಷ್ಯದ ರಾಜಕೀಯ ಪ್ರಯತ್ನಕ್ಕೆ ಸಾಕ್ಷಿಯಾಗಿದ್ದು, ಮೈತ್ರಿ ಮುಂದುವರಿಕೆಗೆ ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ ಎಂಬುದರ ಸೂಚನೆಯಾಗಿದೆ.

ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಮುಂದೆ ಬರಲಿವೆ. ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಎಲ್ಲರೂ ಶ್ರಮಿಸೋಣ. ವಿಧಾನಸಭೆ ಅಧಿವೇಶನದಲ್ಲಿಯೂ ಒಟ್ಟಾಗಿ ಕಾಂಗ್ರೆಸ್‌ನ ದುರಹಂಕಾರವನ್ನು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸಲು ವಿಧಾನಸಭೆ ಅಧಿವೇಶನದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಐದು ಕೇಂದ್ರ ಸಚಿವ ಸ್ಥಾನಗಳನ್ನು ನೀಡಿದ್ದು, ಸಂಸದರೊಂದಿಗೆ ಸೇರಿ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಬಗ್ಗೆ ಗಮನ ಹರಿಸಲಾಗುವುದು ಎಂದು ಹೇಳಿದರು.

ಬಿಬಿಎಂಪಿ, ಜಿಪಂ, ತಾ.ಪಂ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್ ಜೊತೆಗೂಡಿ ಗೆಲ್ಲಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಎಂದರು.

ಕಾಂಗ್ರೆಸ್‌ನ ಸುಳ್ಳು ಭರವಸೆಗಳು, ಭ್ರಷ್ಟಾಚಾರ, ದುರಾಡಳಿತ ಮತ್ತು ಅಭಿವೃದ್ಧಿಯ ಕೊರತೆಯನ್ನು ಜನರೊಂದಿಗೆ ಎತ್ತಿ ತೋರಿಸಬೇಕು ಎಂದು ಯಡಿಯೂರಪ್ಪ ಹೇಳಿದರು. ಮತಾಂಧರನ್ನು ಗುರಿಯಾಗಿಸಿಕೊಂಡು ಸುಳ್ಳು ಭರವಸೆಗಳನ್ನು ನೀಡಿದರೂ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿಯ ಸ್ಥಾನಗಳನ್ನು ಗಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

ಬಿಜೆಪಿ-ಜೆಡಿಎಸ್ ಸಂಸದರು, ಸಚಿವರಿಗೆ ಅರಮನೆ ಮೈದಾನದಲ್ಲಿ ಸನ್ಮಾನ
ರಾಜ್ಯ ಆರ್ಥಿಕ ವ್ಯವಹಾರಗಳ ನಿರ್ವಹಣೆಗೆ ವಿದೇಶಿ ಸಲಹೆಗಾರರ ನೇಮಕ ಆಘಾತಕಾರಿ: ಬಿವೈ ವಿಜಯೇಂದ್ರ

ಎರಡೂ ಪಕ್ಷಗಳ ನಾಯಕರು ಸೌಹಾರ್ದಯುತವಾಗಿ ಸೀಟು ಹಂಚಿಕೆ ಮ್ಯಾಟ್ರಿಕ್ಸ್ ನಡೆಸುವುದರಿಂದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು.

ಇಂಧನ ಬೆಲೆ ಏರಿಕೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮರಣಶಾಸನವಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದರು.

ವಿಧಾನಸಭಾ ಚುನಾವಣೆ ಮುಗಿದ ಕೇವಲ ಒಂದು ವರ್ಷದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣಾ ಫಲಿತಾಂಶ ಸ್ಪಷ್ಟ ಹೊಡೆತ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಜೀನಾಮೆ ನೀಡಬೇಕಿತ್ತು. ಭ್ರಷ್ಟ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ನಾವು ಶ್ರಮಿಸಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com