ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಯಾವಾಗ ಎಂಬುದು ಕುಮಾರಸ್ವಾಮಿಯವರಿಗೆ ಗೊತ್ತು: ವಿ ಸೋಮಣ್ಣ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಸರ್ಕಾರ ಯಾವಾಗ ಪತನವಾಗಲಿದೆ ಎಂಬುದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ತಿಳಿದಿರಬಹುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ಕೇಂದ್ರ ಸಚಿವ ವಿ. ಸೋಮಣ್ಣ
ಕೇಂದ್ರ ಸಚಿವ ವಿ. ಸೋಮಣ್ಣ
Updated on

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಸರ್ಕಾರ ಯಾವಾಗ ಪತನವಾಗಲಿದೆ ಎಂಬುದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ತಿಳಿದಿರಬಹುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಬಿಜೆಪಿ ವತಿಯಿಂದ ಶನಿವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ಹಾಗೂ ಜೆಡಿಎಸ್ ಸಂಸದರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಈ ಸರ್ಕಾರ ಆರು ತಿಂಗಳು ನಡೆಯುತ್ತೋ ಇಲ್ಲವೋ ನನಗೆ ಯಾವುದೇ ಸುಳಿವು ಇಲ್ಲ, ಆದರೆ ಕುಮಾರಸ್ವಾಮಿ ಅವರಿಗೆ ಅದರ ಬಗ್ಗೆ ಮಾಹಿತಿ ತಿಳಿದಿರಬಹುದು. ಕಾಂಗ್ರೆಸ್ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸುವುದೂ ಅನುಮಾನ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಹತ್ತಿರ ಹತ್ತಿರಬರುತ್ತಿದ್ದು, ಬಿಜೆಪಿ-ಜೆಡಿಎಸ್ ಸೂಕ್ತ ಸಿದ್ಧತೆ ನಡೆಸಬೇಕು. ಈ ಸಿದ್ಧತೆ ಹೇಗಿರಬೇಕೆಂದರೆ ಕಾಂಗ್ರೆಸ್ ಸರ್ಕಾರ ತಾನಾಗಿಯೇ ಪತನಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವಂತಿರಬೇಕು ಎಂದು ಹೇಳಿದರು.

ಕೇಂದ್ರ ಸಚಿವ ವಿ. ಸೋಮಣ್ಣ
ಕೆ-ರೈಡ್‌ಗೆ ಶೀಘ್ರದಲ್ಲಿ ಪೂರ್ಣಾವಧಿ ಎಂಡಿ ನೇಮಕ: ಕೇಂದ್ರ ಸಚಿವ ವಿ. ಸೋಮಣ್ಣ

ಬಿಜೆಪಿ ಮತ್ತು ಜೆಡಿಎಸ್ ಒಂದಾಗುವ ಬಹುಕಾಲದ ಕನಸು ನನಸಾಗಿದ್ದು, ಇದು ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ನಿದ್ರೆಯಿಲ್ಲದ ರಾತ್ರಿ ಕಳೆಯುವಂತಹ ಸ್ಥಿತಿ ಎದುರಾಗುವಂತೆ ಮಾಡಿದಿ. ನಾವು ಸಣ್ಣ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಇದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಕಳೆದುಕೊಂಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಆಂತರಿಕ ಭಿನ್ನಾಭಿಪ್ರಾಯದಿಂದ ಪಕ್ಷಕ್ಕೆ ಸೋಲಾಗಿದ್ದು, ಸೋಲಿಗೆ ಕಾರಣರಾದವರ ವಿರುದ್ಧ ಪಕ್ಷದ ರಾಜ್ಯ ಉಸ್ತುವಾರಿ ಬಿವೈ ವಿಜಯೇಂದ್ರ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈಗ ಒಂಬತ್ತು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com