ತುರ್ತು ಪರಿಸ್ಥಿತಿಗೆ 50 ವರ್ಷ: ರಾಜ್ಯ ಬಿಜೆಪಿ ಪ್ರತಿಭಟನೆ; ಸೋನಿಯಾ, ರಾಹುಲ್ ದೇಶದ ಜನರ ಕ್ಷಮೆ ಕೇಳಲು ಆಗ್ರಹ

ದೇಶವು ತುರ್ತು ಪರಿಸ್ಥಿತಿಯನ್ನು 50 ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಂದಿರಾಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿದ್ದಲ್ಲದೇ, ಈ ಸಂಬಂಧ ರಾಹುಲ್ ಹಾಗೂ ಸೋನಿಯಾ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಯಿತು.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
Updated on

ಬೆಂಗಳೂರು: ದೇಶವು ತುರ್ತು ಪರಿಸ್ಥಿತಿಯನ್ನು 50 ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಂದಿರಾಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿದ್ದಲ್ಲದೇ, ಈ ಸಂಬಂಧ ರಾಹುಲ್ ಹಾಗೂ ಸೋನಿಯಾ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷ ದೇಶವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ; ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿಯ ನಾವು ಸಂವಿಧಾನ ಬದಲಿಸಿದ್ದಾಗಿ ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದು ಟೀಕಿಸಿದ ಅವರು, ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಂಥ ಕಾಂಗ್ರೆಸ್ ಪಕ್ಷವು ದೇಶದ ಜನರ ಮುಂದೆ ಅಪರಾಧಿ ಸ್ಥಾನದಲ್ಲಿ ನಿಂತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ರಾಮಲೀಲಾ ಮೈದಾನಕ್ಕೆ ಬಂದು ದೇಶದ ಮುಂದೆ ತಲೆಬಾಗಿ ನಿಂತು, ದೇಶದ ಜನರ ಮುಂದೆ ತಲೆಬಗ್ಗಿಸಿ, ನಾವು ಸಂವಿಧಾನಕ್ಕೆ ಅಪಚಾರ ಮಾಡಿದ್ದಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ ಎಂದು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇಂಥ ಸಂವಿಧಾನಕ್ಕೆ ಅಪಚಾರ ಬಗೆದ ಪಾಪಿಗಳು ಕಾಂಗ್ರೆಸ್ಸಿಗರು ಎಂದು ದೂರಿದರು.

ಬಿಜೆಪಿ ಪ್ರತಿಭಟನೆ
ಉಪಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ತಿರಸ್ಕರಿಸಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ನನ್ನನ್ನು ಬಂಧಿಯಾಗಿ ಮಾಡಿದ್ದ ಬ್ಯಾರಕ್ ಇನ್ನೂ ಉಳಿದಿದೆ ಎಂದು ನೆನಪಿಸಿಕೊಂಡ ಆರ್ ಅಶೋಕ್, ಆ ಅಲ್ಲಿಂದಲೇ ನಾವೆಲ್ಲರೂ ಪ್ರತಿಭಟನೆ ನಡೆಸುತ್ತಿದ್ದೇವೆ. ವಿದ್ಯಾರ್ಥಿಯಾಗಿದ್ದ ತಾನು ಇತರ ವಿದ್ಯಾರ್ಥಿಗಳೊಂದಿಗೆ ಜನಸಂಘ, ಆರೆಸ್ಸೆಸ್ ಪರವಾಗಿ ಇಂದಿರಾ ಗಾಂಧಿಯವರ ವಿರುದ್ಧ ಧಿಕ್ಕಾರ ಕೂಗಿದ್ದನ್ನು ವಿವರಿಸಿದರು. ಅಲ್ಲಿಂದ ಬಂಧಿಸಿ ಚಿತ್ರಹಿಂಸೆ ನೀಡಿದ್ದನ್ನು ತಿಳಿಸಿದರು. 200 ಜನಕ್ಕೆ ಒಂದೇ ಬಾತ್‍ರೂಂ ಇತ್ತು. ಸರಿಯಾಗಿ ಊಟವೂ ಕೊಡುತ್ತಿರಲಿಲ್ಲ. ಪ್ರತಿದಿನ ನಾಯಕರು ಮಾರ್ಗದರ್ಶನ ಮಾಡುತ್ತಿದ್ದರು. ಅಂಥ ದೇಶದ್ರೋಹಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರದಲ್ಲಿದೆ. ಎಮರ್ಜೆನ್ಸಿ ಎಂದರೆ ಕರಾಳ ದಿನ ಎಂದು ನೆನಪಿಸಿಕೊಂಡರು. ಬಳಿಕ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸುವುದಾಗಿ ಪ್ರಕಟಿಸಿದರು. ನಂತರ ಎಲ್ಲರನ್ನೂ ಪೊಲೀಸರು ಬಂಧಿಸಿದರು.

ಪೋಸ್ಟರ್ ಅಭಿಯಾನದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್, ಶಾಸಕ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಮತ್ತಿತರರು ಪಾಲ್ಗೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com