ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಜೂನ್ 28 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಬಿಜೆಪಿ ಮುತ್ತಿಗೆ

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿರುವುದರಿಂದ ಪ್ರಕರಣದ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.
ಬಿ. ವೈ ವಿಜಯೇಂದ್ರ
ಬಿ. ವೈ ವಿಜಯೇಂದ್ರ
Updated on

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಈ ಸಂಬಂಧ ಜೂನ್ 28 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಬುಧವಾರ ಘೋಷಿಸಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿರುವುದರಿಂದ ಪ್ರಕರಣದ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸವರಾಜ ದಡ್ಡಲ್ ಅವರು ಸಹ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.

ಬಿ. ವೈ ವಿಜಯೇಂದ್ರ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SITಯಿಂದ ಮತ್ತೋರ್ವ ಆರೋಪಿ ಬಂಧನ

“ಜೂನ್ 28 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುತ್ತೇವೆ. ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಹಣ ಲೂಟಿ ಮಾಡಿದೆ' ಎಂದು ವಿಜಯೇಂದ್ರ ಆರೋಪಿಸಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪತ್ರದ ಮೇರೆಗೆ ಸಿಬಿಐ ತನಿಖೆ ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರ ತನ್ನ ಇಚ್ಛೆಗೆ ತಕ್ಕಂತೆ ತನಿಖೆ ನಡೆಸಲು ತರಾತುರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ. ಆದರೆ ಎಸ್ಐಟಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ. ರಾಜ್ಯ ಸರ್ಕಾರ ಅಧಿಕಾರಿಗಳ ನಿವಾಸದಿಂದ ಹಣವನ್ನು ವಶಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ತೆಲಂಗಾಣದ ನಕಲಿ ಖಾತೆಗಳಿಗೆ ವರ್ಗಾಯಿಸಿ ಹಿಂಪಡೆಯಲಾಗಿದೆ. ಈ ಹಣವನ್ನು ಲೋಕಸಭೆ ಚುನಾವಣೆ ವೆಚ್ಚಕ್ಕೆ ಬಳಸಲಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಇಂಧನ ಬೆಲೆ ಏರಿಕೆಯ ನಂತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ರಾಜ್ಯದಲ್ಲಿ ಹಣದುಬ್ಬರ ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಜನತೆಗೆ ಶಿಕ್ಷೆ ನೀಡುತ್ತಿದ್ದಾರೆ. ಸ್ಟ್ಯಾಂಪ್ ಸುಂಕವನ್ನು ಹೆಚ್ಚಿಸಲಾಗಿದೆ ಮತ್ತು ವಿದ್ಯುತ್ ದರವನ್ನು ಹೆಚ್ಚಿಸಲಾಗಿದೆ. ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವ ಬೆಲೆಯನ್ನು 25 ಸಾವಿರದಿಂದ 2.5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಖಾತ್ರಿ ಹೆಸರಿನಲ್ಲಿ ಜನರಿಗೆ ವಂಚನೆ ಮಾಡಲಾಗುತ್ತಿದೆ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ' ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com