ಸ್ವಾಮೀಜಿ ಅಭಿಮಾನದಿಂದ ಹಾಗೆ ಹೇಳಿದ್ದಾರೆ; ಪಕ್ಷದ ನಿರ್ಧಾರಕ್ಕೆ ಬದ್ಧ: ಡಿಕೆ ಶಿವಕುಮಾರ್

ದೆಹಲಿಯಲ್ಲಿ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿಯವರು ಅಭಿಮಾನದಿಂದ ಹಾಗೇ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ನವದೆಹಲಿ: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಹೇಳಿಕೆಗೆ ಸ್ವತಃ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ದೆಹಲಿಯಲ್ಲಿ​​ ಪ್ರತಿಕ್ರಿಯಿಸಿದ್ದು, ಅವರು ಅಭಿಮಾನದಿಂದ ಹಾಗೆ ಹೇಳಿದ್ದಾರೆ. ನಾವು ಅದನ್ನು ನಾವು ಸೀರಿಯಸ್​ ಆಗಿ ತೆಗೆದುಕೊಳ್ಳುವುದಿಲ್ಲ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.

ಡಿಕೆ ಶಿವಕುಮಾರ್
ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಆರ್ ಅಶೋಕ್

ಇನ್ನು ದೆಹಲಿಯಲ್ಲಿ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿಯವರು ಅಭಿಮಾನದಿಂದ ಹಾಗೇ ಹೇಳಿದ್ದಾರೆ. ಅದನ್ನು ನಾವು ಸೀರಿಯಸ್​ ಆಗಿ ತಗೊಳೋದಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com