ಲೋಕಸಭೆ ಚುನಾವಣಾ ಫಲಿತಾಂಶದಿಂದ ಕುಗ್ಗಿದ ನೈತಿಕ ಸ್ಥೈರ್ಯ: ZP-TP, ಪಾಲಿಕೆ ಚುನಾವಣೆ ನಡೆಸಲು ಕಾಂಗ್ರೆಸ್ ಹಿಂದೇಟು!

ಬಿಬಿಎಂಪಿ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವಂತೆ ಪಕ್ಷದೊಳಗೆ ಒತ್ತಡವಿದ್ದರೂ ಲೋಕಸಭೆ ಚುನಾವಣೆ ತೀರ್ಪು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಒಕ್ಕಲಿಗ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿವೆ.

ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ನಡೆಯುವ ಬಹು ನಿರೀಕ್ಷಿತ ಚುನಾವಣೆಯ ಬಗ್ಗೆ ಕಾಂಗ್ರೆಸ್ ಮರು ಚಿಂತನೆ ನಡೆಸಿದೆ. ಬಿಬಿಎಂಪಿ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವಂತೆ ಪಕ್ಷದೊಳಗೆ ಒತ್ತಡವಿದ್ದರೂ ಲೋಕಸಭೆ ಚುನಾವಣೆ ತೀರ್ಪು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದೆ. ಬಿಜೆಪಿ-ಜೆಡಿಎಸ್ 146 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿದ್ದರಿಂದ ಬಿಜೆಪಿ ಮತ್ತು ಜೆಡಿಎಸ್ ಪಾಳಯಗಳು ಉತ್ಸಾಹದಲ್ಲಿದ್ದು, ತಮ್ಮ ಮೈತ್ರಿಯನ್ನು ಮತ್ತಷ್ಟು ಗಟ್ಟಿಗೊಳಿಸಿದ್ದು, ಪಂಚಾಯತ್ ಚುನಾವಣೆಯಲ್ಲಿ ಒಟ್ಟಿಗೆ ಹೋಗುವುದಾಗಿ ಘೋಷಿಸಿವೆ.

ಆಂತರಿಕ ಸಮೀಕ್ಷೆಯು ಅನುಕೂಲಕರ ಅಭಿಪ್ರಾಯ ನೀಡದ ಕಾರಣ ಶಾಸಕರು ಮತ್ತು ಮುಖಂಡರು ಚುನಾವಣೆಗೆ ಆತುರ ಹೊಂದಿಲ್ಲ ಎಂದು ಕಾಂಗ್ರೆಸ್ ಮೂಲಗಳು ಬಹಿರಂಗಪಡಿಸಿವೆ. ಬಿಜೆಪಿ-ಜೆಡಿಎಸ್ ದಕ್ಷಿಣ ಜಿಲ್ಲೆಗಳಲ್ಲಿ ಉತ್ತಮ ಸಾಧನೆ ಮಾಡಲಿದ್ದು, ಈಗ ಚುನಾವಣೆ ನಡೆದರೆ ಪಾಲಿಕೆ ಮತ್ತು ಪಂಚಾಯ್ತಿಗಳಲ್ಲಿ ತನ್ನ ಸೀಟು ಹಂಚಿಕೆಯೊಂದಿಗೆ ಅಧಿಕಾರ ಹಿಡಿಯಲಿದೆ.

ಸಾಂದರ್ಭಿಕ ಚಿತ್ರ
ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಸ್ಪರ್ಧಿಸಿದರೆ ಸಂಪೂರ್ಣ ಬೆಂಬಲ ನೀಡುವೆ- ಸಿ ಪಿ ಯೋಗೇಶ್ವರ್

65 ವಾರ್ಡ್‌ಗಳ ಪೈಕಿ 35ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡು ಲೋಕಸಭೆ ಚುನಾವಣೆಗೂ ಮುನ್ನವೇ ಪಾಲಿಕೆ ಚುನಾವಣೆ ನಡೆಸುವಂತೆ ಮೈಸೂರು ನಗರ ಕಾಂಗ್ರೆಸ್‌ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಸಲ್ಲಿಸಿದ್ದರು. ಪಾಲಿಕೆಯಲ್ಲಿ ಕಾಂಗ್ರೆಸ್ 24, ಬಿಜೆಪಿ 21 ಮತ್ತು ಜೆಡಿಎಸ್ 18 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿತ್ತು. ಇದರ ಜೊತೆಗೆ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ನರಸಿಂಹರಾಜ ಒಡೆಯರ್ ಅವರ ಅಮೋಘ ಗೆಲುವು ಕಾಂಗ್ರೆಸ್ ನಾಯಕರನ್ನು ಬದಲಿಸುವಂತೆ ಮಾಡಿದೆ.

ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪೈಪೋಟಿ ನೀಡಿದರೂ ಈಗ ಚುನಾವಣೆ ನಡೆದರೆ ಕಾಂಗ್ರೆಸ್ 12-13 ವಾರ್ಡ್‌ಗಳಿಗಿಂತ ಹೆಚ್ಚು ಗೆಲ್ಲುವುದು ಕಷ್ಟ ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. ಎನ್.ಆರ್.ಮೊಹಲ್ಲಾ, ಕೆಸರೆ, ಯರಗನಹಳ್ಳಿ, ರಾಘವೇಂದ್ರ ನಗರ ಮತ್ತಿತರ ಹಿಂದೂ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಮತಗಳನ್ನು 53,000ದಿಂದ 62,000ಕ್ಕೆ ಸುಧಾರಿಸುವಲ್ಲಿ ಯಶಸ್ವಿಯಾಗಿದೆ.

ಜಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಲ್ಲದೆ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಲೀಡ್ ಸಾಧಿಸಿದ್ದಾರೆ.ಹೀಗಾಗಿ ಮೈಸೂರು, ಮಂಡ್ಯ, ಕೋಲಾರ ಮತ್ತಿತರ ಜಿಲ್ಲೆಗಳ ಕಾಂಗ್ರೆಸ್ ಶಾಸಕರು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಒಲವು ತೋರುತ್ತಿಲ್ಲ. ಇನ್ನು ಕೆಲವೇ ತಿಂಗಳಲ್ಲಿ ಬಿಜೆಪಿ-ಜೆಡಿಎಸ್ ಗೆಲುವಿನ ವೇಗ ಕಡಿಮೆಯಾಗಲಿದೆ ಎಂದ ಅವರು, ಕಾಂಗ್ರೆಸ್ ಪಕ್ಷವನ್ನು ಆತ್ಮಾವಲೋಕನ ಮಾಡಿಕೊಳ್ಳಲು ಹಾಗೂ ಸಂಘಟಿಸಲು ಬೂತ್ ಹಾಗೂ ವಾರ್ಡ್ ಮಟ್ಟದ ಸಭೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗದಿಂದ ನ್ಯಾಯಾಂಗ ನಿಂದನೆ ಕೇಸ್; ನೋಟಿಸ್‌ ಜಾರಿ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಸ್ಥಳೀಯ ಸಮಸ್ಯೆಗಳು ಮತ್ತು ಸ್ಥಳೀಯ ಅಭ್ಯರ್ಥಿಗಳ ಮೇಲೆ ಅವಲಂಬಿತವಾಗಿದ್ದರೂ, ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಬಿಜೆಪಿಯೊಂದಿಗೆ ಯಾವುದೇ ಮಟ್ಟಕ್ಕೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ, ಹೀಗಾಗಿ ಆತುರಪಡದಿರುವುದು ಉತ್ತಮ ಎಂದು ತಿಳಿಸಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭವಿಷ್ಯ ಕುರಿತು ಬೆಂಗಳೂರಿನ ಶಾಸಕರು, ಮುಖಂಡರು ಸಿಎಂ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ಗೆದ್ದು ಜಿಪಂ ಹಾಗೂ ನಗರ ಪಾಲಿಕೆಗಳಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಏಕೈಕ ಉದ್ದೇಶದಿಂದ ಜೆಡಿಎಸ್ ಮುಖಂಡರಾದ ಜಿಟಿ ದೇವೇಗೌಡ, ಸಾ.ರಾ.ಮಹೇಶ್ ಮತ್ತಿತರರು ಎರಡು ಪಕ್ಷಗಳ ಸಂಖ್ಯಾಬಲದ ಆಧಾರದ ಮೇಲೆ ಸೀಟು ಹಂಚಿಕೆಗೆ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com