ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರವಿ V/S ರವಿ ಪೈಪೋಟಿ; ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಕುತ್ತು?

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮತ್ತೊಬ್ಬ ಎಂಎಲ್‌ಸಿ ಎನ್ ರವಿಕುಮಾರ್ ಅವರ ಹೆಸರು ಕೂಡ ಕೇಳಿಬರುತ್ತಿದೆ.
ಸಿ.ಟಿ ರವಿ ಮತ್ತು ಎನ್. ರವಿ ಕುಮಾರ್
ಸಿ.ಟಿ ರವಿ ಮತ್ತು ಎನ್. ರವಿ ಕುಮಾರ್
Updated on

ಬೆಂಗಳೂರು: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿರುವುದರಿಂದ, ಪ್ರತಿಪಕ್ಷ ಬಿಜೆಪಿಯು ಪರಿಷತ್ತಿನಲ್ಲಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲು ಮುಂದಾಗಿದೆ.

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮತ್ತೊಬ್ಬ ಎಂಎಲ್‌ಸಿ ಎನ್ ರವಿಕುಮಾರ್ ಅವರ ಹೆಸರು ಕೂಡ ಕೇಳಿಬರುತ್ತಿದೆ. ವಿರೋಧ ಪಕ್ಷದ ನಾಯಕರಾಗಿದ್ದ ಪೂಜಾರಿ ಅವರು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅದರಂತೆ ಅವರು ಪರಿಷತ್ತಿಗೆ ರಾಜೀನಾಮೆ ನೀಡಿದರು. ಆಡಳಿತಾರೂಢ ಕಾಂಗ್ರೆಸ್ ಅನ್ನು ಸಮರ್ಥವಾಗಿ ಎದುರಿಸಬಲ್ಲ ಮೇಲ್ಮನೆಗೆ ಬಿಜೆಪಿ ಈಗ ಪ್ರಬಲ ವಿರೋಧ ಪಕ್ಷದ ನಾಯಕನನ್ನು ಹುಡುಕುತ್ತಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಒಕ್ಕಲಿಗರಾಗಿದ್ದಾರೆ, ಸಿ.ಟಿ.ರವಿ ಕೂಡ ಒಕ್ಕಲಿಗರಾಗಿರುವುದರಿಂದ ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ನೀಡುವ ಸಾಧ್ಯತೆ ಕಡಿಮೆ. ಒಬಿಸಿ ಸಮುದಾಯಕ್ಕೆ ಸೇರಿದ ರವಿಕುಮಾರ್ ಅವರು ಜನಪ್ರಿಯ ಮುಖಂಡರಾಗಿದ್ದಾರೆ, ಇದರೊಂದಿಗೆ ಸದನದಲ್ಲಿ ಒಕ್ಕಲಿಗ ಮತ್ತು ಒಬಿಸಿ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ನೀಡಿರುವುದಾಗಿ ಪಕ್ಷ ಹೇಳಿಕೊಳ್ಳಬಹುದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲಿಂಗಾಯತ. ಅಲ್ಲದೆ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕೂಡ ಲಿಂಗಾಯತರಾಗಿದ್ದಾರೆ.

ಸಿ.ಟಿ ರವಿ ಮತ್ತು ಎನ್. ರವಿ ಕುಮಾರ್
ಹೆಚ್ಚುವರಿ ಡಿಸಿಎಂ ವಿಚಾರ ಕಾಂಗ್ರೆಸ್ ಸರ್ಕಾರವನ್ನೇ ಪತನಗೊಳಿಸಲಿದೆ: ಸಿ.ಟಿ ರವಿ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ನಾಯಕರೊಬ್ಬರು ರವಿಕುಮಾರ್ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಹಲವು ನಾಯಕರು ಮತ್ತು ಎಂಎಲ್‌ಸಿಗಳು ಉತ್ಸುಕರಾಗಿದ್ದಾರೆ. ಪಕ್ಷದ ನೆಲೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರು ಶ್ರಮಿಸಿದ್ದಾರೆ, ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಪಕ್ಷದ ಹೈಕಮಾಂಡ್ ಉತ್ಸುಕವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಸದನದಲ್ಲಿ ಕಾಂಗ್ರೆಸ್‌ಗಿಂತ ಹೆಚ್ಚಿನ ಶಾಸಕರಿದ್ದಾರೆ. ರಾಜ್ಯದಲ್ಲಿ ಪೂರ್ಣ ಬಹುಮತದ ಸರ್ಕಾರವಿದ್ದು, ಹೀಗಾಗಿ ಪ್ರಬಲ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲು ಬಿಜೆಪಿ ಮೇಲೆ ಒತ್ತಡವಿದೆ.

ಈ ಹಿಂದೆ ಸಚಿವರಾಗಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಸಿ.ಟಿ.ರವಿ ಪಕ್ಷಕ್ಕೆ ಮತ್ತೊಂದು ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಒಕ್ಕಲಿಗ ನಾಯಕರಾಗಿರುವ ಸಿ,ಟಿ ರವಿ ಅವರು ಕೂಡ ಒಂದು ವಿಭಾಗದ ಬೆಂಬಲವನ್ನು ಪಡೆದಿದ್ದಾರೆ. ಮತ್ತೊಬ್ಬ ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ಕೂಡ ರೇಸ್ ನಲ್ಲಿದ್ದಾರೆ.

ದೆಹಲಿಯಲ್ಲಿರುವ ವಿಜಯೇಂದ್ರ ಅವರು ಹಿರಿಯ ನಾಯಕರ ಜೊತೆ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ, ಅಶೋಕ ಅವರ ಸ್ಥಾನಕ್ಕೆ ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಗುಸುಗುಸು ಕೇಳಿ ಬರುತ್ತಿದೆ. ಜುಲೈನಲ್ಲಿ ಅಧಿವೇಶನ ಪ್ರಾರಂಭವಾಗುವ ನಿರೀಕ್ಷೆಯಿದ್ದು ಅಷ್ಟರಲ್ಲಿ ವಿಜಯೇಂದ್ರ ಹೆಸರನ್ನು ಅಂತಿಮಗೊಳಿಸಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com