'ಟ್ರೋಲ್ ಮಿನಿಸ್ಟರ್' ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಟೀಕೆ

ಕಲಬುರಗಿ ಸಂಸದ ಉಮೇಶ್​ ಜಾಧವ್​ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಹತ್ಯೆಯಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಲಬುರಗಿ ಸಂಸದ ಉಮೇಶ್​ ಜಾಧವ್​ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಹತ್ಯೆಯಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಬಿಜೆಪಿ, ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಜಿಲ್ಲೆಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು ನಡೆಯುತ್ತಿದೆ ಎಂದು ಕಿಡಿಕಾರಿದೆ.

ಶರಣರ ನಾಡಾಗಿದ್ದ ಕಲ್ಬುರ್ಗಿಯನ್ನು ಮರಣದ ನಾಡನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅದರಲ್ಲಿಯೂ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾದ ಮೇಲೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸಚಿವರ ಪುಂಡ ಪೋಕರಿ ಪಟಾಲಂ ಹೇಳಿದ್ದೇ ಕಾನೂನು, ಮಾಡಿದ್ದೇ ನ್ಯಾಯ ಎನ್ನುವಷ್ಟರ ಮಟ್ಟಿಗೆ ಆಡಳಿತ ಕುಸಿದಿದೆ.

ಆಳಂದ ತಾಲೂಕಿನಲ್ಲಿ ಹಾಡುಹಗಲೆ ಬಿಜೆಪಿ ಮುಖಂಡ ಮಹಾಂತಪ್ಪ ಆಲೂರೆಯವರನ್ನು ಕೊಚ್ಚಿ ಕೊಲೆ ಮಾಡಿದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕಲ್ಬುರ್ಗಿಯಲ್ಲಿ ಆಗುತ್ತಿರುವ ಕೊಲೆ,ಸುಲಿಗೆಗಳಿಗೆ ಲೆಕ್ಕವೇ ಇಲ್ಲ. ಮೊದಲು ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಿ, ಇಲ್ಲವಾದಲ್ಲಿ ನಿವೃತ್ತಿ ಘೋಷಿಸಿ ಮನೆಗೆ ನಡೆಯಿರಿ ಎಂದು ಹೇಳಿದೆ.

ಸಂಗ್ರಹ ಚಿತ್ರ
ಕಲಬುರಗಿ: ಕಣ್ಣಿಗೆ ಖಾರದ ಪುಡಿ ಎರಚಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬಂಟನ ಬರ್ಬರ ಹತ್ಯೆ!

ಟ್ರೋಲ್ ಮಿನಿಸ್ಟರ್ ಅವರ ಉಸ್ತುವಾರಿ ಅವಧಿಯಲ್ಲಿ ಕಲ್ಬುರ್ಗಿಯಲ್ಲಿ ಕೇವಲ ಕೊಲೆ-ಸುಲಿಗೆಗಳದ್ದೇ ದರ್ಬಾರು. ಪ್ರಿಯಾಂಕ್ ಉಸ್ತುವಾರಿ ಸಚಿವರಾದ ಈ 10 ತಿಂಗಳಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಸಾಲು ಸಾಲಾಗಿ ಹತ್ಯೆಗೀಡಾಗುತ್ತಿದ್ದಾರೆ. ಇದಕ್ಕೆ ಕಲ್ಬುರ್ಗಿಯನ್ನು ತಮ್ಮ ಪುಂಡ ಪೋಕರಿ ಪಟಾಲಂಗೆ ಒಪ್ಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆಯವರೇ ನೇರ ಹೊಣೆ.

ಮಹಾಂತಪ್ಪ ಆಲೂರೆಯವರ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ಮುಖಂಡ ಗಿರೀಶ್ ಚಕ್ರರವರನ್ನು ಸಹ ಹತ್ಯೆಗೈಯಲಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಕಲ್ಬುರ್ಗಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣ ಹಳ್ಳ ಹಿಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಮೊದಲು ಸಂಪುಟದಿಂದ ವಜಾ ಮಾಡಿ ಎಂದು ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com