ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ

ರಾಷ್ಟ್ರ ದ್ರೋಹಿಗಳ ರಕ್ಷಣೆಯೇ ಆದ್ಯತೆಯೇ: ಸಿದ್ದರಾಮಯ್ಯಗೆ ವಿಜಯೇಂದ್ರ ಟಾಂಗ್

ಮಾನ್ಯ ಸಿದ್ದರಾಮಯ್ಯನವರೇ ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ.

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಫೆ. 27ರಂದು ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಎಫ್‌ಎಸ್‌ಎಲ್‌ ವರದಿಯನ್ನು ಬಿಡುಗಡೆ ಮಾಡಿದೆ.

ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ,

ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯತೋರುತ್ತಾರೆ, ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ? ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ, ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ.

ಬಿ.ವೈ ವಿಜಯೇಂದ್ರ

ಬೆಂದ ಮನೆಯಲ್ಲಿ ಗಳ ಇರಿಯುವ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನ ಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ ?

ಬಿವೈ ವಿಜಯೇಂದ್ರ
ತಮಿಳುನಾಡಿನಲ್ಲಿ ರಾಜಕೀಯ ಮೈತ್ರಿಗೆ ಆದ್ಯತೆ ನೀಡಿದ ಪರಿಣಾಮ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಬಿವೈ ವಿಜಯೇಂದ್ರ

ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ.

ಖಾಸಗಿ FSL ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com