ಬೆಳಗಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ!

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳಗಾವಿಗೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪಕ್ಷದ ನಾಯಕರು ಆತ್ಮೀಯ ಸ್ವಾಗತ ನೀಡಿದರು.
ಜೆಪಿ ನಡ್ಡಾ, ವಿಜಯೇಂದ್ರ
ಜೆಪಿ ನಡ್ಡಾ, ವಿಜಯೇಂದ್ರ

ಬೆಳಗಾವಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳಗಾವಿಗೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪಕ್ಷದ ನಾಯಕರು ಆತ್ಮೀಯ ಸ್ವಾಗತ ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಸಂಸದೆ ಮಂಗಳಾ ಸುರೇಶ್ ಅಂಗಡಿ, ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬೆನಕೆ ಮೊದಲಾದವರು ಆತ್ಮೀಯವಾಗಿ ಬರಮಾಡಿಕೊಂಡರು.

ಜೆಪಿ ನಡ್ಡಾ, ವಿಜಯೇಂದ್ರ
ರಾಷ್ಟ್ರ ದ್ರೋಹಿಗಳ ರಕ್ಷಣೆಯೇ ಆದ್ಯತೆಯೇ: ಸಿದ್ದರಾಮಯ್ಯಗೆ ವಿಜಯೇಂದ್ರ ಟಾಂಗ್

ನಂತರ ಚಿಕ್ಕೋಡಿಗೆ ತೆರಳಿದ ನಡ್ಡಾ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಳಗಾವಿಯಲ್ಲಿ ನಾಲ್ಕು ಜಿಲ್ಲೆಗಳ ಕೋರ್ ಕಮಿಟಿ ಸಭೆ ಹಾಗೂ ಪ್ರಬುದ್ಧರ ಜೊತೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com