ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ 7ರಂದು ಅಂತಿಮ: ಡಿಕೆ ಶಿವಕುಮಾರ್

ಮಾರ್ಚ್ 7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಮಾರ್ಚ್ 7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ತಾವು ಸೋಮವಾರ ಸಭೆ ನಡೆಸಿದ್ದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾವು ಮಾರ್ಚ್ 7 ರಂದು ನಮ್ಮ ಅಂತಿಮ ಕೇಂದ್ರ ಚುನಾವಣಾ ಸಮಿತಿ ಸಭೆಯನ್ನು ನಡೆಸುತ್ತೇವೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ದೆಹಲಿಗೆ ಹೋಗುತ್ತಿದ್ದು, ಅಲ್ಲಿ ನಾವು ಅಭ್ಯರ್ಥಿಗಳ (ಮೊದಲ) ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ ಎಂದು ಅವರು ಹೇಳಿದರು.

ಡಿಕೆ ಶಿವಕುಮಾರ್
Lok Sabha Elections: ದೆಹಲಿ, ಗುಜರಾತ್, ಗೋವಾ, ಹರಿಯಾಣದಲ್ಲಿ ಲೋಕಸಭೆ ಸೀಟು ಹಂಚಿಕೆ ಘೋಷಿಸಿದ ಎಎಪಿ-ಕಾಂಗ್ರೆಸ್

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದರೊಂದಿಗೆ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯು ಗೆಲುವು ಸಾಧಿಸಿದ್ದರು.

ಆಗ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದು ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು.

ಆದರೆ ರಾಜಕೀಯ ರಂಗವು ಅಂದಿನಿಂದ ಗಮನಾರ್ಹವಾಗಿ ಬದಲಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿರುವ ಜೆಡಿಎಸ್ ಇದೀಗ ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಬಗ್ಗೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com