ತೊಂದರೆ ಕೊಟ್ಟಷ್ಟೂ ರಾಜಕೀಯವಾಗಿ ಗಟ್ಟಿಯಾಗಿ ಬೆಳೆಯುತ್ತೇನೆ: ಡಿಸಿಎಂ ಡಿಕೆ.ಶಿವಕುಮಾರ್

ನನಗೆಷ್ಟು ಕಷ್ಟ ಕೊಡುತ್ತಾರೋ ರಾಜಕೀಯವಾಗಿ ಅಷ್ಟೇ ದೊಡ್ಡ ರೀತಿಯಲ್ಲಿ ಬೆಳೆಯುತ್ತೇನೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್

ಬೆಂಗಳೂರು: ನನಗೆಷ್ಟು ಕಷ್ಟ ಕೊಡುತ್ತಾರೋ ರಾಜಕೀಯವಾಗಿ ಅಷ್ಟೇ ದೊಡ್ಡ ರೀತಿಯಲ್ಲಿ ಬೆಳೆಯುತ್ತೇನೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು,

ತಮ್ಮ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂ ಕೋರ್ಟ್​​ನಲ್ಲಿ ರಿಲೀಪ್ ಸಿಕ್ಕಿದೆ ಎಂಬ ಮಾಹಿತಿ ಇದೆ. ನನ್ನ ಮೇಲೆ ಏನು ಕೇಸು ಇತ್ತೋ ಅದು ತಪ್ಪು ಅಂತ ತೀರ್ಪು ಬಂದಿದೆ. ಕೈಗೊಂಡಿರುವ ಕ್ರಮ ಎಲ್ಲವೂ ತಪ್ಪು ಎಂದು ಆದೇಶ ಆಗಿದೆ. ಕಷ್ಟದ ಜೀವನದ ಅತಿ ದೊಡ್ಡ ಸಂತೋಷದ ದಿನ ಇಂದು, ನ್ಯಾಯವನ್ನು ಎತ್ತಿ ಹಿಡಿದಿದ್ದಕ್ಕಾಗಿ ನಾನು ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಕಷ್ಟದ ಸಮಯದಲ್ಲಿ ನನ್ನ ಪಕ್ಕದಲ್ಲಿದ್ದ ನನ್ನ ಎಲ್ಲಾ ಸ್ನೇಹಿತರು, ಕುಟುಂಬ, ನಾಯಕರು ಮತ್ತು ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆಂದು ಹೇಳಿದರು.

ನ್ಯಾಯಾಲಯದಿಂದ ಪರಿಹಾರ ಸಿಗುವ ವಿಶ್ವಾಸವಿತ್ತು. ಜೈಲಿಗೆ ಹೋಗಿದ್ದ ಮೊದಲ ದಿನದಿಂದಲೂ ಆತ್ಮವಿಶ್ವಾಸದಿಂದ ಇದ್ದೆ. ನಾನೇನೂ ತಪ್ಪು ಮಾಡಿಲ್ಲ ಎಂಬುದು ಗೊತ್ತಿತ್ತು. ಈಗ ನನ್ನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಭವಿಷ್ಯದಲ್ಲಿಯೂ ಆತ್ಮವಿಶ್ವಾಸದಿಂದ ಇರುತ್ತೇನೆ, ಅವರು ಮೇಲ್ಮನವಿ ಸಲ್ಲಿಸಬಹುದು, ಅದರ ವಿರುದ್ಧವೂ ಹೋರಾಡಲು ಸಿದ್ಧ ಎಂದು ತಿಳಿಸಿದರು.

ಡಿಸಿಎಂ ಡಿಕೆ.ಶಿವಕುಮಾರ್
ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಗೆ ಬಿಗ್ ರಿಲೀಫ್: ED ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

ನಾನು ತಪ್ಪು ಮಾಡಿಲ್ಲ ಅಂತ ಕೋರ್ಟ್ ಹೇಳಿದೆ. ಈಗಲೂ ಸಿಬಿಐ ಏನೇನು ಮಾಡುತ್ತದೆ ಎಂಬುದನ್ನು ಸದ್ಯದಲ್ಲೇ ಹೇಳುತ್ತೇನೆ. ಸುಪ್ರೀಂ ಕೋರ್ಟ್ ತೀರ್ಪಿಗೆ ಮೇಲ್ಮನವಿ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ನನಗೆ ಮಾರ್ಗ ಕಷ್ಟ ಅನ್ನಿಸಿಲ್ಲ. ಜೈಲಿಗೆ ಹೋದಾಗಲೂ ಆತ್ಮ ವಿಶ್ವಾಸದಲ್ಲಿ ಹೋಗಿದ್ದೆ.‌ ಎಷ್ಟು ತೊಂದರೆ ಕೊಡಲು ಯತ್ನಿಸುತ್ತಾರೆ ಅಷ್ಟು ಗಟ್ಟಿಯಾಗಿ ಬೆಳೆಯಲು ಶಕ್ತಿ ನೀಡುತ್ತದೆ. ನಮ್ಮ ಸುತ್ತಮುತ್ತ ಇರುವವರಿಗೆ ಕಿರುಕುಳ ನೀಡಲಾಗುತ್ತಿದೆ. ನನಗೆ ಯಾರೂ ವಿರೋಧಿಗಳಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com