ಪಾಕ್ ಪರ ಘೋಷಣೆ: ಕಾಂಗ್ರೆಸ್‌ನ ಪ್ರಮುಖ ನಾಯಕರೊಂದಿಗೆ ಆರೋಪಿ; ಫೋಟೊ ಬಿಡುಗಡೆ ಮಾಡಿದ ಬಿಜೆಪಿ

ಕರ್ನಾಟಕ ಬಿಜೆಪಿ ಬುಧವಾರ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಲ್ಲಿ ಒಬ್ಬರಾದ ಮೊಹಮ್ಮದ್ ಶಫಿ ನಾಶಿಪುಡಿ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರೊಂದಿಗಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ - ಕಾಂಗ್ರೆಸ್ ಲೋಗೋ
ಬಿಜೆಪಿ - ಕಾಂಗ್ರೆಸ್ ಲೋಗೋ
Updated on

ಬೆಂಗಳೂರು: ಕರ್ನಾಟಕ ಬಿಜೆಪಿ ಬುಧವಾರ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಲ್ಲಿ ಒಬ್ಬರಾದ ಮೊಹಮ್ಮದ್ ಶಫಿ ನಾಶಿಪುಡಿ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರೊಂದಿಗಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಪಕ್ಷವು ದೇಶ ದ್ರೋಹಿಗಳ‌ ಕಮಿಟಿಯನ್ನು ಮಾಡಿಕೊಂಡಿದೆ. ಅದರ ಸದಸ್ಯರೇ ಪಾಕ್ ಪರ ಘೋಷಣೆ ಕೂಗಿದ ಪಾ'ಕೈ'ಸ್ತಾನಿಗಳು! ಎಂದು ಬಿಜೆಪಿ ಕಿಡಿಕಾರಿದೆ.

ಬಂಧಿತ ನಾಶಿಪುಡಿಯ ಸಂಪರ್ಕವು ರಾಹುಲ್ ಗಾಂಧಿ ಅವರಿಂದ ಹಿಡಿದು ನಿನ್ನೆ ಮೊನ್ನೆ ಗೆದ್ದ ನಾಸೀರ್ ಹುಸೇನ್‌ವರೆಗೂ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಚಿಟಿಕೆ ಹೊಡೆದಂತೆ ಭೇಟಿ ಮಾಡುವ ತಾಕತ್ತು ಕೂಡ ನಾಶಿಪುಡಿಗೆ ಇದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ನಾಶಿಪುಡಿ ಇರುವ ಫೋಟೊಗಳನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಬಂಧಿತ ಕಾಂಗ್ರೆಸ್‌ನ ದೇಶ ದ್ರೋಹಿ ಘಟಕದ ಸದಸ್ಯ ನಾಶಿಪುಡಿಯನ್ನು ರಕ್ಷಣೆ ಮಾಡಲು ಪಾಕೈಸ್ತಾನ್ ಸರ್ಕಾರ ಏನೇ ಸರ್ಕಸ್ ಮಾಡಿದರೂ ಸಾಧ್ಯವಾಗಲಿಲ್ಲ ಎನ್ನುವುದೇ ಅವರ ಕಳವಳಕ್ಕೆ ಕಾರಣವಾಗಿದೆ ಎಂದಿದೆ.

ಬಿಜೆಪಿ - ಕಾಂಗ್ರೆಸ್ ಲೋಗೋ
ಪಾಕ್ ಪರ ಘೋಷಣೆ: ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಆಗ್ರಹ

ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಮೊಹಮ್ಮದ್ ನಾಶಿಪುಡಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ಮಾಧ್ಯಮ ಮತ್ತು ಸಂವಹನ ಉಸ್ತುವಾರಿ ಪವನ್ ಖೇರಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಸಲೀಂ ಅಹ್ಮದ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಜತೆಗಿರುವ ಫೋಟೊಗಳನ್ನು ಬಿಜೆಪಿ ಹಂಚಿಕೊಂಡಿದೆ.

ಇದೇ ವೇಳೆ ಬುಧವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಖಾಸಗಿ ಸಂಸ್ಥೆಯಿಂದ ಪಡೆದ ಎಫ್‌ಎಸ್‌ಎಲ್ ವರದಿಗೆ ಸರ್ಕಾರ ಮಾನ್ಯತೆ ನೀಡುವುದಿಲ್ಲ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ನೀಡುವ ವರದಿಯೇ ಅಂತಿಮ. ಬಿಜೆಪಿ ಖಾಸಗಿ ಎಫ್‌ಎಸ್‌ಎಲ್ ವರದಿಯನ್ನು ಬಹಿರಂಗಗೊಳಿಸಿದೆ ಮತ್ತು ಜನರನ್ನು ದಾರಿ ತಪ್ಪಿಸುತ್ತಿದೆ' ಎಂದರು.

ಬಿಜೆಪಿ - ಕಾಂಗ್ರೆಸ್ ಲೋಗೋ
ಪಾಕ್ ಪರ ಘೋಷಣೆ ಕೂಗಿಲ್ಲ: ವಿಚಾರಣೆ ವೇಳೆ ತಪ್ಪೊಪ್ಪಿಗೆಗೆ ಬಂಧಿತರ ನಕಾರ!

ಪ್ರಕರಣದ ಕುರಿತು ಬಿಜೆಪಿ ನಿರಂತರ ದಾಳಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್, 'ನಮ್ಮ ಸರ್ಕಾರದ ಅವಧಿಯಲ್ಲಿ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆಯ ಬಗ್ಗೆ ತನಿಖೆ ನಡೆಸಲಿಲ್ಲ. ಆಗ ಬಿಜೆಪಿ ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ಏಕೆ ಬಂಧಿಸಲಿಲ್ಲ? ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದರು. ಆ ಘಟನೆಯಲ್ಲಿ ಎಫ್‌ಎಸ್‌ಎಲ್ ವರದಿಯ ಅಗತ್ಯವಿರಲಿಲ್ಲ. ಈ ವಿಷಯದಲ್ಲಿ ರಾಜಕೀಯವನ್ನು ತರಬಾರದು ಎಂದು ನಾವು ಮೌನವಾಗಿದ್ದೇವೆ. ಆದರೆ, ಈ ವಿಷಯದ ಬಗ್ಗೆ ಬಿಜೆಪಿಯ ಆಟಗಳನ್ನು ನೋಡಿದ ನಂತರ ನಮ್ಮ ಸ್ಥಳೀಯ ಶಾಸಕರು ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದು ಅವರು ಹೇಳಿದರು.

ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಮತ್ತೊಬ್ಬ ಆರೋಪಿ ಮೊಹಮ್ಮದ್ ಇಲ್ತಾಜ್ ರಾಹುಲ್ ಗಾಂಧಿ ಅವರೊಂದಿಗೆ ಇರುವ ಫೋಟೊವನ್ನು ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com