ತುಮಕೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನ ಮುದ್ದ ಹನುಮೇಗೌಡರ ವಿರುದ್ಧ ಸೋಮಣ್ಣ ಸ್ಪರ್ಧೆ; ಸಚಿವ ಕೆ.ಎನ್ ರಾಜಣ್ಣ

ಮುಂಬರುವ ಲೋಕಸಭೆ ಚುನಾವಣೆಗೆ ತುಮಕೂರು ಭಾಗದಲ್ಲಿ ಕಾಂಗ್ರೆಸ್‌ನ ಎಸ್‌ಪಿ ಮುದ್ದಹನುಮೇಗೌಡ ವಿರುದ್ಧ ಬಿಜೆಪಿಯ ವಿ ಸೋಮಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಕೆ.ಎನ್ ರಾಜಣ್ಣ
ಕೆ.ಎನ್ ರಾಜಣ್ಣ

ತುಮಕೂರು: ಮುಂಬರುವ ಲೋಕಸಭೆ ಚುನಾವಣೆಗೆ ತುಮಕೂರು ಭಾಗದಲ್ಲಿ ಕಾಂಗ್ರೆಸ್‌ನ ಎಸ್‌ಪಿ ಮುದ್ದಹನುಮೇಗೌಡ ವಿರುದ್ಧ ಬಿಜೆಪಿಯ ವಿ ಸೋಮಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಆದರೆ ವಿ.ಸೋಮಣ್ಣ ಅವರಿಗೆ ಬಿಜೆಪಿ ತುಮಕೂರು ಟಿಕೆಟ್ ನೀಡಲಿದೆ ಎಂಬ ಮಾಹಿತಿ ನನಗಿದೆ, ಕಾಂಗ್ರೆಸ್ ಮುದ್ದಹನುಮೇಗೌಡ ಅವರನ್ನು ಕಣಕ್ಕಿಳಿಸುತ್ತದೆ ಎಂದು ರಾಜಣ್ಣ ತಿಳಿಸಿದ್ದಾರೆ.

ಎಚ್ ‌ಸಿ ಮಹದೇವಪ್ಪ ಅವರು ದಲಿತ ಸಿಎಂ ಬೇಕು ಎಂಬ ಬೇಡಿಕೆ ಮುಂದಿಡುವುದರಲ್ಲಿ ಯಾವುದೇ ತಪ್ಪು ಮಾಡಿಲ್ಲ, ಸಿಎಂ ಬದಲಾವಣೆಯಾದರೆ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು.
ಕೆ ಎನ್ ರಾಜಣ್ಣ- ಸಹಕಾರ ಸಚಿವ

2019 ರ ಲೋಕಸಭೆ ಚುನಾವಣೆ ನಂತರ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕಳೆದ ತಿಂಗಳಷ್ಟೇ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡರು. ದಲಿತ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ ಅವರು, ಎಚ್‌ಸಿ ಮಹದೇವಪ್ಪ ಅವರು ದಲಿತ ಸಿಎಂ ಬೇಕು ಎಂಬ ಬೇಡಿಕೆ ಮುಂದಿಡುವುದರಲ್ಲಿ ಯಾವುದೇ ತಪ್ಪು ಮಾಡಿಲ್ಲ, ಸಿಎಂ ಬದಲಾವಣೆಯಾದರೆ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದರು.

ಕೆ.ಎನ್ ರಾಜಣ್ಣ
ನಾವೇನು ಗುಲಾಮರೇ: ರಾಜಣ್ಣ ಹೇಳಿಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ- ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಮೇಲಿನ ಪ್ರಕರಣಗಳ ರದ್ದತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದಿರುವ ರಾಜಣ್ಣ, ‘ದಲಿತರನ್ನು ಸಿಎಂ ಮಾಡಬೇಕೆಂದು ಇಷ್ಟು ವರ್ಷಗಳಿಂದ ಒತ್ತಾಯಿಸುತ್ತಲೇ ಬಂದಿದ್ದೇವೆ. ಶಿವಕುಮಾರ್ ಸಿಎಂ ಆಗುವುದನ್ನು ತಡೆಯುವುದಿಲ್ಲ ಎಂದು ರಾಜಣ್ಣ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com