ಲೋಕಸಭೆ ಚುನಾವಣೆ: ಮಂಡ್ಯ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಸಿ.ಎಸ್ ಪುಟ್ಟರಾಜು ಬಹುತೇಕ ಫಿಕ್ಸ್?

ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸರಣಿ ಸಭೆಗಳಲ್ಲಿ ಪುಟ್ಟರಾಜು ಅವರ ಹೆಸರು ಚರ್ಚೆಯಾಗಿದೆ.
ಸಿ.ಎಸ್ ಪುಟ್ಟರಾಜು
ಸಿ.ಎಸ್ ಪುಟ್ಟರಾಜು

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಸಂಸದೆ ಸುಮಲತಾ ಬಿಜೆಪಿಯಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ, ಆದರೆ ಜೆಡಿಎಸ್‌ನ ಮಾಜಿ ಸಚಿವ ಸಿಎಸ್‌ ಪುಟ್ಟರಾಜು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸರಣಿ ಸಭೆಗಳಲ್ಲಿ ಪುಟ್ಟರಾಜು ಅವರ ಹೆಸರು ಚರ್ಚೆಯಾಗಿದೆ. ಕಳೆದ ಕೆಲವು ದಿನಗಳಿಂದ ನಡೆದ ಈ ಸಭೆಗಳು ಮುಖ್ಯವಾಗಿ ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಕ್ಷೇತ್ರಗಳ ಮೇಲೆ ಕೇಂದ್ರೀಕೃತವಾಗಿವೆ. ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ನಿನ್ನೆ ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಸಿದರು.

ಎನ್‍ಡಿಎ ಅಭ್ಯರ್ಥಿಯಾಗಿ ಪುಟ್ಟರಾಜು ಅವರನ್ನು ಸ್ಪರ್ಧೆಗಿಳಿಸಿದರೆ ಗೆಲುವಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಗಿದೆ. ಆದರೆ ಅಭ್ಯರ್ಥಿ ಯಾರೆಂಬುದನ್ನು ಇನ್ನೂ ಅಧಿಕೃತವಾಗಿ ತೀರ್ಮಾನ ಮಾಡಿಲ್ಲ. 2019ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಡವೂ ಇದೆ.

ಸಿ.ಎಸ್ ಪುಟ್ಟರಾಜು
ಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಡಾ. ಎಚ್.ಎನ್ ರವೀಂದ್ರ ರಾಜಿನಾಮೆ!

ಸುಮಲತಾ ಅವರು ಎರಡನೇ ಅವಧಿಗೆ ಸ್ಪರ್ಧಿಸಲು ಮುಂದಾಗಿದ್ದಾರೆ, ಆದರೆ ಮಂಡ್ಯ ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಪುಟ್ಟರಾಜು ಅವರು ಚುನಾವಣ ಪ್ರಚಾರ ಆರಂಭಿಸಲು ಕೋರಿದ್ದಾರೆ. ಪುಟ್ಟರಾಜು ಒಂದು ಬಾರಿ ಲೋಕಸಭೆಗೆ ಮಂಡ್ಯವನ್ನು ಪ್ರತಿನಿಧಿಸಿದ್ದಾರೆ.

ಸಭೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಯಾರನ್ನು ಸ್ಪರ್ಧೆಗಿಳಿಸಬೇಕು, ಚುನಾವಣೆ ಸಿದ್ಧತೆ ಹೇಗಿರಬೇಕು ಎಂಬ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡು ವುದಾಗಿ ಕುಮಾರಸ್ವಾಮಿ ಸಭೆಗೆ ತಿಳಿಸಿದ್ದಾರೆ.

ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕು. ಮೈತ್ರಿ ಧರ್ಮ ಪಾಲಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಲೋಪಕ್ಕೆ ಅವಕಾಶ ಮಾಡಿಕೊಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ಸಿ.ಎಸ್ ಪುಟ್ಟರಾಜು
ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಸುಮಲತಾಗೆ ಹಿನ್ನಡೆ, ಡಾ. ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್!?

ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಕ್ರಿಯಾಶೀಲರಾಗಿರಲು ಸೂಚಿಸಲಾಗಿದ್ದು, ಚುನಾವಣೆಗೆ ಸಿದ್ಧರಾಗಿ ಎಂದು ಪುಟ್ಟರಾಜು ಅವರಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧಿಸುವುದು ಅನುಮಾನ ಎನ್ನಲಾಗಿದೆ.

ಇನ್ನೂ ಮಂಡ್ಯದ ಅಭ್ಯರ್ಥಿಯಾಗಿ ಗೌರಿಬಿದನೂರು ಪಕ್ಷೇತರ ಶಾಸಕ ಕೆ ಎಚ್ ಪುಟ್ಟಸ್ವಾಮಿಗೌಡ ಅವರ ಸಹೋದರ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪರಿಗಣಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com