ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಯೇ ಬಿಜೆಪಿಗೆ ದೊಡ್ಡಸವಾಲು; ಸೋಮವಾರ ಬಿಜೆಪಿ ಪಟ್ಟಿ ಪ್ರಕಟ

ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯ ನಂತರ ಬಿಜೆಪಿ ಹೈಕಮಾಂಡ್ ಕರ್ನಾಟಕಕ್ಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ, ಆದರೆ ಬಿಜೆಪಿ ಇನ್ನೂ ಮೀನ ಮೇಷ ಎಣಿಸುತ್ತಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯ ನಂತರ ಬಿಜೆಪಿ ಹೈಕಮಾಂಡ್ ಕರ್ನಾಟಕಕ್ಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ.

ಇತರ ಹಲವು ರಾಜ್ಯಗಳಲ್ಲಿ 195 ಹೆಸರುಗಳನ್ನು ಘೋಷಿಸಿರುವ ಬಿಜೆಪಿ, ಉಳಿದ ಲೋಕಸಭಾ ಕ್ಷೇತ್ರಗಳಿಗೆ ಶೀಘ್ರದಲ್ಲೇ ಹೆಸರುಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಕ್ಷವು ಈ ಹಿಂದೆ ಮಾರ್ಚ್ 8 ರಂದು ಹೆಸರುಗಳನ್ನು ಘೋಷಿಸಲು ನಿರ್ಧರಿಸಲಾಗಿತ್ತು, ಆದರೆ ಮಹಾಶಿವರಾತ್ರಿ ಮತ್ತು ಪಕ್ಷದ ನಾಯಕರಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಹೆಚ್ಚಿನ ಸಮಯ ಬೇಕಾಗಿರುವುದರಿಂದ ಮುಂದೂಡಲಾಗಿದೆ.

ರಾಜ್ಯ ಬಿಜೆಪಿ ಘಟಕ ಹಂಚಿಕೊಂಡಿರುವ ಪಟ್ಟಿಯ ಪ್ರತಿ ಅಭ್ಯರ್ಥಿಗಳ ಬಗ್ಗೆ ರಾಷ್ಟ್ರೀಯ ನಾಯಕರು ತೀವ್ರ ಸಂಶೋಧನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳ ಬಗ್ಗೆ ಪಿಪಿಟಿ ಪ್ರೆಸೆಂಟೇಶನ್ ಕೂಡ ಇತ್ತು.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಈ ವಾರ ಫೈನಲ್!

ಗುರುವಾರ ನಡೆದ ಸಭೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರಿಂದ ಆಗುವ ಅನುಕೂಲ, ಅನಾನುಕೂಲಗಳು, ಅವರ ಬಲಾಬಲ, ಸ್ಥಳೀಯ ನಾಯಕರ ಬೆಂಬಲ, ನಿಷ್ಠೆ ಮತ್ತಿತರ ವಿಚಾರಗಳ ಕುರಿತು ಮುಖಂಡರು ಚರ್ಚೆ ನಡೆಸಿದರು.

ಬೆಂಗಳೂರು ಉತ್ತರ, ಬೀದರ್, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಾಲಿ ಸಂಸದರ ಪೈಕಿ ಅರ್ಧದಷ್ಟು ಮಂದಿಯನ್ನು ಬದಲಾಯಿಸಲು ದೆಹಲಿಯ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿಯಲ್ಲಿ ಮಂಡ್ಯ ಮತ್ತು ಕೋಲಾರದಂತಹ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಿಜೆಪಿಗೆ ಸವಾಲಾಗಿದೆ.

ಬಿಜೆಪಿ ನಾಯಕರು ಈ ಬಾರಿ 400 ಸ್ಥಾನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಕರ್ನಾಟಕವು ಈ ಸಂಖ್ಯೆಯನ್ನು ತಲುಪಲು ನಮಗೆ ಸಹಾಯ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಆದ್ದರಿಂದ, ಸ್ಪರ್ಧಿಗಳ ಅಂತಿಮ ಪಟ್ಟಿ ತಯಾರಿಸಲು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳಲಾಗುತ್ತಿದೆ. ನಾವು 2019 ರ ಸಂಖ್ಯೆಯನ್ನು ಉಳಿಸಿಕೊಳ್ಳಲು ಬಯಸುತ್ತೇವೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಕರ್ನಾಟಕದಲ್ಲಿ ಜೆಡಿಎಸ್ ನಾಯಕರು ತಮ್ಮ ನೆಲೆಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ಸಭೆಗಳನ್ನು ಪ್ರಾರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com