Lok Sabha election: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳು ಮುಖಾಮುಖಿ

ಗೀತಾ ಶಿವರಾಜ್ ಕುಮಾರ್ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ಹಾಲಿ ಸಂಸದ ಬಿ ವೈ ರಾಘವೇಂದ್ರ ಅವರು ಬಿಜೆಪಿಯ ಅಗ್ರಗಣ್ಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ.
Lok Sabha election: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳು ಮುಖಾಮುಖಿ

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ ರಾಜ್ ಕುಮಾರ್ ಅವರ ಜೇಷ್ಠ ಪುತ್ರ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್ ಅವರು ಸ್ಪರ್ಧಿಸುತ್ತಿದ್ದಾರೆ. ಈ ಮೂಲಕ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಸ್ಪರ್ಧೆಗೆ ಸಾಕ್ಷಿಯಾಗಲಿದೆ.

ಗೀತಾ ಶಿವರಾಜ್ ಕುಮಾರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ಹಾಲಿ ಸಂಸದ ಬಿ ವೈ ರಾಘವೇಂದ್ರ ಅವರು ಬಿಜೆಪಿಯ ಅಗ್ರಗಣ್ಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ. ಬಿಜೆಪಿಯ ಮೊದಲ ಪಟ್ಟಿಯಲ್ಲಿ ರಾಘವೇಂದ್ರ ಅವರ ಹೆಸರು ಘೋಷಣೆಯಾಗದಿದ್ದರೂ, ಕಳೆದ ಐದು ವರ್ಷಗಳಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಕ್ಷೇತ್ರದ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.

ಮೊನ್ನೆ ಮಾರ್ಚ್ 3ರಂದು ಶಿವಮೊಗ್ಗದಲ್ಲಿ ತನ್ನ ಸೋದರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಮನೆ ಪಕ್ಕ ಮನೆಯನ್ನು ಬಾಡಿಗೆ ಪಡೆದಾಗಲೇ ಮಾಧ್ಯಮಗಳಲ್ಲಿ ಅವರು ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂಬ ಸುದ್ದಿ ಹರಿದಾಡಿತ್ತು.

ಕರ್ನಾಟಕದ ರಾಜಕೀಯದಲ್ಲಿ ಬಂಗಾರಪ್ಪ ಮತ್ತು ಯಡಿಯೂರಪ್ಪ ಇಬ್ಬರೂ ಬಗರ್ ಹುಕುಂ ಜಮೀನು, ಬಂಧಿತ ಕಾರ್ಮಿಕರು, ಶರಾವತಿ ನದಿ ತೆರವು ಹಾಗೂ ಜಿಲ್ಲೆಯ ಒಣಪ್ರದೇಶದಳಿಗೆ ನೀರಾವರಿಯಂತಹ ಜನರ ಸಮಸ್ಯೆಗಳಿಗಾಗಿ ಹೋರಾಡಿ ರಾಜ್ಯ ರಾಜಕಾರಣಕ್ಕೆ ಬಂದವರು. ಇಬ್ಬರೂ ಜಿಲ್ಲೆಯ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈಗ ಎರಡು ಕುಟುಂಬಗಳ ಎರಡನೇ ತಲೆಮಾರಿನವರು ಮುಖಾಮುಖಿಯಾಗುತ್ತಿರುವುದು ಕುತೂಹಲ ಮೂಡಿಸಿದೆ’ ಎಂದು ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರು ಹೇಳುತ್ತಾರೆ.

Lok Sabha election: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳು ಮುಖಾಮುಖಿ
ಲೋಕಸಭೆ ಚುನಾವಣೆ: 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ

ರಾಘವೇಂದ್ರ ಅವರು 2009 ರಿಂದ ಸ್ಪರ್ಧಿಸಿದ ಎಲ್ಲಾ ಮೂರು ಸಂಸತ್ ಚುನಾವಣೆಗಳಲ್ಲಿ ಸತತವಾಗಿ ಗೆದ್ದಿದ್ದಾರೆ. ಅವರು 2018 ರ ಉಪಚುನಾವಣೆ ಹಾಗೂ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರನ್ನು ಎರಡು ಬಾರಿ ಸೋಲಿಸಿದರು. 2014ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ ಅವರನ್ನು ಯಡಿಯೂರಪ್ಪ ಸೋಲಿಸಿದ್ದರು.

ಮಾರ್ಚ್ 3 ರಂದು ಶಿವರಾಜಕುಮಾರ್ ಅವರು ತಮ್ಮ ಪತ್ನಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಖಂಡಿತವಾಗಿಯೂ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದು, ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಶಿವರಾಜಕುಮಾರ್ ಅವರು ಚಿತ್ರನಟರಾಗಿ ಜನಪ್ರಿಯರಾಗಿರುವ ಹಿನ್ನೆಲೆಯಲ್ಲಿ ರಾಘವೇಂದ್ರ ವಿರುದ್ಧ ಪಕ್ಷ ಪ್ರಬಲ ಸ್ಪರ್ಧೆ ಒಡ್ಡುವ ಸಾಧ್ಯತೆಯಿದೆ.

Lok Sabha election: ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಸಿಎಂಗಳ ಮಕ್ಕಳು ಮುಖಾಮುಖಿ
ಮಂಡ್ಯ ಲೋಕಸಭೆ ಕ್ಷೇತ್ರ ಹಂಚಿಕೆ ಬಿಕ್ಕಟ್ಟು: ಬಿಜೆಪಿ ಟಿಕೆಟ್ ಗಾಗಿ ಸುಮಲತಾ ಪಟ್ಟು; ದಳಪತಿಗಳು ಸೈಲೆಂಟ್- ಏನಿದರ ಗುಟ್ಟು?

ಮಧು ಬಂಗಾರಪ್ಪ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಈ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಭರವಸೆಗಳನ್ನು ಕಾಂಗ್ರೆಸ್‌ನ ಐದು ಭರವಸೆಗಳು ಮೀರಿಸುತ್ತವೆ ಎಂದು ಹೇಳಿದ್ದರು.

ಉಡುಪಿ ಜಿಲ್ಲೆಯ ಬೈಂದೂರು ಸೇರಿದಂತೆ ಕ್ಷೇತ್ರದಾದ್ಯಂತ ಕೈಗೊಂಡಿರುವ ರೈಲ್ವೆ ಯೋಜನೆಗಳು ಸೇರಿದಂತೆ ಅಭಿವೃದ್ಧಿ ಕಾರ್ಯಗಳು ಚುನಾವಣೆಯಲ್ಲಿ ತನಗೆ ಅನುಕೂಲವಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸಂಸದ ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com