ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಗುಲ್ಬರ್ಗ ಕ್ಷೇತ್ರಕ್ಕೆ ಖರ್ಗೆ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿದೆ: ಡಿಕೆ ಶಿವಕುಮಾರ್

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ANI

ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತಾರೆ. ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು,

ಡಿಸಿಎಂ ಡಿಕೆ ಶಿವಕುಮಾರ್
ತೊಂದರೆ ಕೊಟ್ಟಷ್ಟೂ ರಾಜಕೀಯವಾಗಿ ಗಟ್ಟಿಯಾಗಿ ಬೆಳೆಯುತ್ತೇನೆ: ಡಿಸಿಎಂ ಡಿಕೆ.ಶಿವಕುಮಾರ್

ಖರ್ಗೆ ಅವರು ಕರ್ನಾಟಕದಿಂದ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಎಐಸಿಸಿ ಅಧ್ಯಕ್ಷರು. ಅನೇಕರು ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಗುಲ್ಬರ್ಗ ಕ್ಷೇತ್ರಕ್ಕೆ ಖರ್ಗೆ ಅವರ ಮಾತ್ರ ಪ್ರಸ್ತಾಪಿಸಲಾಗಿದೆ. ಖರ್ಗೆಯವರು ದೇಶದಾದ್ಯಂತ ಪ್ರವಾಸ ಕೂಡಾ ಮಾಡಬೇಕಿದ್ದು, ಹೀಗಾಗಿ ಅಂತಿಮವಾಗಿ ಅಧ್ಯಕ್ಷರೇ ಸ್ಪರ್ಧೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ​​​ ತಿಳಿಸಿದರು.

ಸಚಿವರ ಸ್ಪರ್ಧೆ ಬಗ್ಗೆ ಚರ್ಚೆ ಕುರಿತು ಮಾತನಾಡಿ, ಸಚಿವರ ಸ್ಪರ್ಧೆ ಬಗ್ಗೆ ಚರ್ಚೆ ಆಗಿದೆ ಎಂದರು. ಇದೇ ವೇಳೆ ಸಿಎಂ ಪುತ್ರ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಆ ಬಗ್ಗೆ ಚರ್ಚೆ ಆಗಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com