ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ: ಬಿ ಎಸ್ ಯಡಿಯೂರಪ್ಪ

ಇಂದು ಬೆಳ್ಳಂಬೆಳಗ್ಗೆ ಈಶ್ವರಪ್ಪ ಅಭಿಮಾನಿಗಳು ಮತ್ತು ಕುರುಬ ಸಮಾಜದ ಮುಖಂಡರು ಬಿಎಸ್​ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ, ಕಾಂತೇಶ್​ಗೆ ಟಿಕೆಟ್​ ನೀಡುವಂತೆ ಒತ್ತಾಯಿಸಿದ್ದಾರೆ
ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
Updated on

ಶಿವಮೊಗ್ಗ: ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಈಶ್ವರಪ್ಪ ಅಭಿಮಾನಿಗಳು ಮತ್ತು ಕುರುಬ ಸಮಾಜದ ಮುಖಂಡರು ಬಿಎಸ್​ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ, ಕಾಂತೇಶ್​ಗೆ ಟಿಕೆಟ್​ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಳುಹಿಸಿದ್ದೆ. ದೆಹಲಿಯಲ್ಲಿ ಅಮಿತ್ ಶಾ ಅವರ ಜೊತೆ ಚರ್ಚಿಸಲು ನನ್ನ ಜೊತೆ ಈಶ್ವರಪ್ಪ ಬರಲಿ ಎಂದರು.

ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ

ನಾನು ಬೇರೆ ಅಲ್ಲ ಈಶ್ವರಪ್ಪ ಬೇರೆ ಅಲ್ಲ. ನಾನೇ ಖುದ್ದಾಗಿ ಅವರ ಜೊತೆ ನಿಂತು ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ಮುಂದೂಡಲಾಗಿದ್ದು, ಚುನಾವಣೆ ಸಮಿತಿ ನಾಳೆ ಮತ್ತೆ ಸಭೆಯನ್ನು ಕರೆಯಬಹುದು. ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಬಹುದು. ಹಾಗಾಗಿ ಒಂದು ದಿನ ಮುಂದೂಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com