ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಜನತೆ ಬರದಿಂದ ಬಳಲುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೋಮನ್ ಚಕ್ರವರ್ತಿ ನೀರೋ ರೀತಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ - ಸಿದ್ದರಾಮಯ್ಯ
ಎಚ್‌ಡಿ ಕುಮಾರಸ್ವಾಮಿ - ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಜನತೆ ಬರದಿಂದ ಬಳಲುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೋಮನ್ ಚಕ್ರವರ್ತಿ ನೀರೋ ರೀತಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ ಉಂಟಾಗಿದೆ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರ್ಕಾರವು ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಲಜ್ಜೆಗೇಡು! ಎಂದಿದ್ದಾರೆ.

'ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!' ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ! ರಾಜ್ಯದ ಪಾಲಿನ ಝೀರೋ!. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ ಇದೆ.. ಅದುವೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ! ಸುಳ್ಳಾಗದು ಎಂದು ಕಿಡಿಕಾರಿದ್ದಾರೆ.

ಬರಪೀಡಿತ ರೈತರಿಗೆ ಕೊಡಲು ಈ ನಿಮ್ಮ ಸರ್ಕಾರದ ಬಳಿ 2000 ರೂ. ಗತಿ ಇಲ್ಲ. ಆದರೆ, ಗ್ಯಾರಂಟಿ ಸಮಾವೇಶಗಳಿಗೆ ಬೇಕಾದಷ್ಟು ಹಣವಿದೆ. ತುರ್ತು ಉದ್ದೇಶಕ್ಕೆ ಇರಿಸಿರುವ ಜಿಲ್ಲಾಧಿಕಾರಿ, ತಹಸೀಲ್ದಾರುಗಳ ಪಿಡಿ ಖಾತೆಗೆ ನಿಮ್ಮ ಸರ್ಕಾರ ಕನ್ನ ಹಾಕಿದೆ. ಜನರ ಹಾಹಾಕಾರವೇ ನಿಮಗೆ ಭರ್ಜರಿ ಆಹಾರ! ಹೌದಲ್ಲವೇ? ಇದೆಂಥಾ ಸಿದ್ದನಾಮಿಕ್ಸ್ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಈ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ಸುರಿದಿದ್ದಿರಿ ಎಂಬುದರ ಬಗ್ಗೆ ಜನರ ಮುಂದೆ ಲೆಕ್ಕ ಇಡಿ. ಬೇಕಾದರೆ 'ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ' ಹೊರಡಿಸಿ. ನಿಮ್ಮ ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ - ಸಿದ್ದರಾಮಯ್ಯ
ತುಮಕೂರು ಲೋಕಸಭಾ ಕ್ಷೇತ್ರದಿಂದ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿಸಲು ಚಿಂತನೆ? ಅತಂತ್ರದಲ್ಲಿ ವಿ ಸೋಮಣ್ಣ!

ಮುಂದುವರಿದು, ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂಗಳ ಏಜೆನ್ಸಿಗಳ ಮೂಲಕ 'ಜಾಹೀರಾತು ಜಾತ್ರೆ'ಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರದ ತೆವಲಿಗೆ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲವೇ? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com