ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ: ಸಾಧು ಕೋಕಿಲ

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಸೋಮವಾರ ಹೇಳಿದ್ದಾರೆ.
ಸಾಧು ಕೋಕಿಲ
ಸಾಧು ಕೋಕಿಲ

ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ, ನಿರ್ಮಾಪಕ-ನಿರ್ದೇಶಕ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಧು ಕೋಕಿಲ ಅವರು, ನಾನೊಬ್ಬ ಕಲಾವಿದನಾಗಿರುವರಿಂದ ಎಲ್ಲ ಸಮುದಾಯಗಳ ಜನ ನನ್ನನ್ನು ಇಷ್ಟಪಡುತ್ತಾರೆ. ನಾನು ಯಾವತ್ತೂ ಜನರನ್ನು ತಾರತಮ್ಮ ಭಾವದಿಂದ ನೋಡಿದವನಲ್ಲ, ಎಲ್ಲ ವರ್ಗದವರನ್ನು ಸಮಾನವಾಗಿ ನೋಡುತ್ತೇನೆ ಎಂದರು.

ಚಾಮರಾಜಪೇಟೆ ಮತ್ತು ಶಿವಾಜಿನಗರದಲ್ಲಿರುವ ಕ್ರೈಸ್ತರೆಲ್ಲ ನನಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಒಂದು ವೇಳೆ ಟಿಕೆಟ್ ಸಿಕ್ಕರೆ ಖಂಡಿತ ಗೆಲ್ತೀನಿ ಅನ್ನುವ ಕೋಕಿಲ, ಟಿಕೆಟ್ ಆಕಾಂಕ್ಷಿಯಾಗಿರುವುದು ನಿಜವಾದರೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಸಾಧು ಕೋಕಿಲ
ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಗುಲ್ಬರ್ಗ ಕ್ಷೇತ್ರಕ್ಕೆ ಖರ್ಗೆ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿದೆ: ಡಿಕೆ ಶಿವಕುಮಾರ್

ಸಾಧು ಕೋಕಿಲ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದು, ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಸುಮಾರು 15 ಲಕ್ಷ ಕ್ರಿಶ್ಚಿಯನ್ ಸಮುದಾಯದವರಿರುವುದರಿಂದ ಗೆಲ್ಲುವ ಅವಕಾಶ ಹೆಚ್ಚು ಎಂದು ಇತ್ತೀಚಿಗಷ್ಟೇ ಚಲನ ಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡ ಸಾಧು ಕೋಕಿಲ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com