ಲೋಕ ಮಹಾ ಸಮರ: ಸಮರ್ಥರ ಹುಡುಕಾಟದಲ್ಲಿ ಕಾಂಗ್ರೆಸ್; ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಹೆಸರು ಮುನ್ನಲೆಗೆ!

ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸೋಮವಾರ ಮ್ಯಾರಥಾನ್ ಸಭೆ ನಡೆಸಿತು, ಸಭೆಯಲ್ಲಿ ಹಾಲಿ ಸಚಿವರು ಮತ್ತು ಶಾಸಕರ ಕುಟುಂಬದ ಸದಸ್ಯರನ್ನೂ ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದೆ.
ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪಾಡ್
ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪಾಡ್

ಬೆಂಗಳೂರು: ಲೋಕಸಭೆಯ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸೋಮವಾರ ಮ್ಯಾರಥಾನ್ ಸಭೆ ನಡೆಸಿತು, ಸಭೆಯಲ್ಲಿ ಹಾಲಿ ಸಚಿವರು ಮತ್ತು ಶಾಸಕರ ಕುಟುಂಬದ ಸದಸ್ಯರನ್ನೂ ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಸ್ಥಾನಗಳ ಕುರಿತು ಚರ್ಚಿಸಲು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಭೆಗೆ ಆಹ್ವಾನಿಸಿದ್ದು ಕುತೂಹಲ ಮೂಡಿಸಿತ್ತು.

ಸತೀಶ್ ಜಾರಕಿಹೊಳಿ ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣರಾವ್ ಚಿಂಗಳೆ ಅವರ ಹೆಸರನ್ನು ಸೂಚಿಸಿದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸತೀಶ್ ಅವರಿಗೆ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಸಲಹೆ ನೀಡಿದ್ದಾರೆ.

ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪಾಡ್
ಸಂಚಲನ ಸೃಷ್ಟಿಸಿದ ಹಳೇ ಮೈಸೂರು ಭಾಗ: ಸಂಸತ್ ಪಾಸ್ ಪ್ರಕರಣದಲ್ಲಿ 'ಸಿಂಹ' ತಲೆದಂಡ; ಮೈತ್ರಿ ಹಿತಾಸಕ್ತಿಗಾಗಿ 'ಸುಮಲತಾ' ಬಲಿ!

ಬೆಂಗಳೂರು ಸೆಂಟ್ರಲ್‌ಗೆ ಬಿಡಿಎ ಅಧ್ಯಕ್ಷ ಮತ್ತು ಶಾಂತಿನಗರ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಹೆಸರುಗಳೂ ಕೇಳಿ ಬಂದಿವೆ. ಬೆಳಗಾವಿ ಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಚರ್ಚೆಗೆ ಗ್ರಾಸವಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಹಾಗೂ ಯುವ ನಾಯಕ ರಕ್ಷಾ ರಾಮಯ್ಯ ಅವರ ಹೆಸರು ಚರ್ಚೆಯಾಗಿದೆ. ಕಾಂಗ್ರೆಸ್ ಚುನಾವಣಾ ಸಮಿತಿಗೆ ಹೆಸರುಗಳನ್ನು ಕಳುಹಿಸಲು ನಿರ್ಧರಿಸಲಾಗಿದ್ದು, ಮಾರ್ಚ್ 14 ರಂದು ಪಕ್ಷದ ಅಂತಿಮ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com