ಲೋಕಸಭೆ ಚುನಾವಣೆ: ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ; ಪಕ್ಷದ ಅಭ್ಯರ್ಥಿಯಾಗುವಂತೆ ಯದುವೀರ್ ಗೆ ಆಹ್ವಾನ!

ಮೈಸೂರು ರಾಜಮನೆತನದ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
Updated on

ಮೈಸೂರು: ಮೈಸೂರು ರಾಜಮನೆತನದ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದ್ದು, ಪಕ್ಷದ ಅಭ್ಯರ್ಥಿಯಾಗುವಂತೆ ಕಾಂಗ್ರೆಸ್ ಕೂಡ ಅವರಿಗೆ ಆಹ್ವಾನ ನೀಡಿದೆ ಎಂದು ಹೇಳಲಾಗಿದೆ.

ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಹೊಸ ಮುಖವನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ, ಆದರೆ ಯದುವೀರ್ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆಯೇ ಎಂದು ಇನ್ನೂ ಸ್ಪಷ್ಟವಾಗಿಲ್ಲ, ಏಕೆಂದರೆ ಈ ಸಂಬಂಧ ರಾಜಮನೆತನದ ಯಾವೋಬ್ಬರು ಇದುವರೆಗೆ ಸಾರ್ವಜನಿಕವಾಗಿ ಮಾತನಾಡಿಲ್ಲ. ಗೆಲ್ಲುವ ಅಭ್ಯರ್ಥಿಗಳಿಗಾಗಿ ಶೋಧ ನಡೆಸುತ್ತಿರುವ ಕಾಂಗ್ರೆಸ್, ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಲು ಸಮುದಾಯದ ಜನರನ್ನು ಆಕರ್ಷಿಸುವ ಯುವ ರಾಜಮನೆತನವನ್ನು ಸಂಪರ್ಕಿಸಿದೆ ಎಂಬುದು ಈಗ ಬೆಳಕಿಗೆ ಬಂದಿದೆ.

ಪಕ್ಷದ ನಾಯಕರು ಕೆಲವು ವಾರಗಳ ಹಿಂದೆ ಈ ಪ್ರಸ್ತಾಪವನ್ನು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಯದುವೀರ್ ಅಥವಾ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಇನ್ನೂ ಪ್ರತಿಕ್ರಿಯಿಸಿಲ್ಲ. ಹಿಂದಿನ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ನಾಲ್ಕು ಬಾರಿ ಗೆದ್ದು ಒಂದು ಬಾರಿ ಸೋತಿದ್ದರು, ಹೀಗಾಗಿ ರಾಜಮನೆತನದೊಂದಿಗೆ ಕಾಂಗ್ರೆಸ್ ಉತ್ತಮ ಸಂಬಂಧ ಹೊಂದಿದೆ. 2009 ರಲ್ಲಿ ಶ್ರೀಕಂಠದತ್ತ ಒಡೆಯರ್ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟರು ಮತ್ತು ಮಾಜಿ ಸಚಿವ ಎ.ಎಚ್.ವಿಶ್ವನಾಥ್ ಲೋಕಸಭೆ ಚುನಾವಣೆಯಲ್ಲಿ ಗೆದ್ದರು.

1991ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಶ್ರೀಕಂಠದತ್ತ, ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ದೇವರಾಜ್‌ ಅರಸರ ಪುತ್ರಿ ಚಂದ್ರಪ್ರಭಾ ಅರಸ್‌ ವಿರುದ್ಧ ಸೋತಿದ್ದರು. ದಲಿತ, ಮುಸ್ಲಿಂ ಹಾಗೂ ಇತರೆ ತುಳಿತಕ್ಕೊಳಗಾದವರ ವಿರುದ್ಧ ಶ್ರೀಕಂಠದತ್ತ ಅವರಂತೆ ರಾಜಮನೆತನದವರು ಬಿಜೆಪಿ ಜತೆ ಹೋಗುವ ಸಾಹಸಕ್ಕೆ ಮುಂದಾಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರ ವಿಶ್ವಾಸ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್: ಕಲಬುರಗಿಗೆ ಖರ್ಗೆ ಅಳಿಯ, ಮೈಸೂರು-ಕೊಡಗು ಕ್ಷೇತ್ರಕ್ಕೆ ಯತೀಂದ್ರ?

ಶ್ರೀಕಂಠದತ್ತ ಅವರ ನಿಧನಕ್ಕೆ ಮುಂಚೆಯೇ ರಾಜಮನೆತನವು ರಾಜಕೀಯದಿಂದ ದೂರವಿದ್ದರೂ, ಎಲ್ಲಾ ಪಕ್ಷಗಳ ರಾಜಕಾರಣಿಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಮೊದಲ ಭೇಟಿ ನೀಡಿದ ಸಂದರ್ಭದಲ್ಲಿ ಯದುವೀರ್ ಮತ್ತು ಪ್ರಮೋದಾ ದೇವಿ ಅವರನ್ನು ಭೇಟಿಯಾಗುವಂತೆ ಮಾಡಿದ ರಾಜ್ಯ ಬಿಜೆಪಿ ಘಟಕವು ರಾಜಮನೆತನದ ಮನಸ್ಸನ್ನು ಬದಲಾಯಿಸಲು ಪ್ರಬಲ ಪ್ರಯತ್ನ ನಡೆಸಿತ್ತು.

ಲವು ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮೋದಿಯವರು ರಾಜಮನೆತನದವರೊಂದಿಗೆ ಉಪಹಾರ ಸೇವಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಳೆದ ವರ್ಷ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಅವರನ್ನು ಭೇಟಿ ಮಾಡಿ, ರಾಜಮನೆತನಕ್ಕೆ ಬಿಜೆಪಿ ಹತ್ತಿರವಾಗುತ್ತಿದೆ ಎಂಬ ಭಾವನೆ ಬಿತ್ತಿದ್ದರು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ನನಗೆ ರಾಜಕೀಯದಲ್ಲಿ ಆಸಕ್ತಿಯೂ ಇಲ್ಲ, ಭವಿಷ್ಯದಲ್ಲಿಯೂ ರಾಜಕೀಯಕ್ಕೆ ಬರಲ್ಲ: ಯದುವೀರ್ ಒಡೆಯರ್

ಮಾಜಿ ರಾಜ್ಯಸಭಾ ಸದಸ್ಯ ಮತ್ತು ರಾಜಸ್ಥಾನದ ಬಿಜೆಪಿ ನಾಯಕರಾಗಿರುವ ಡುಂಗರ್‌ಪುರ ರಾಜಮನೆತನದ ಹರ್ಷವರ್ಧನ್ ಸಿಂಗ್ ಅವರ ಮೂಲಕ ಯದುವೀರ್ ಅವರನ್ನು ಸಂಪರ್ಕಿಸಲು ಪಕ್ಷವು ಪ್ರಯತ್ನಿಸಿದೆ ಎಂದು ಹೇಳಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನದಲ್ಲಿ ಯದುವೀರ್ ಅವರನ್ನು ಕಣಕ್ಕಿಳಿಸುವುದು ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕರು ನಂಬಿದ್ದಾರೆ, ಏಕೆಂದರೆ ಕ್ಷೇತ್ರದ ಜನರು ರಾಜಮನೆತನದೊಂದಿಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿದ್ದಾರೆ. ಯದುವೀರ್ ಅವರು ಕಾಂಗ್ರೆಸ್‌ನ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಮೈಸೂರು ಪ್ರದೇಶದಲ್ಲಿ ತನ್ನ ಹಿಡಿತವನ್ನು ಬಲಪಡಿಸುವ ಮೂಲಕ ಯುವಕರು ಮತ್ತು ವಿದ್ಯಾವಂತ ಜನರನ್ನು ಪಕ್ಷದತ್ತ ಸೆಳೆಯಬಹುದು ಎಂದು ಅವರು ಭಾವಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com